ರಾಜ್ಯದಲ್ಲಿ ಚೈತ್ರಾ ಕುಂದಾಪುರ (Hindu Activist Chaitra Kundapur) ಬಂಧನ ಭಾರೀ ಸಂಚನವನ್ನೇ ಮೂಡಿಸಿದೆ.
ಯಾರೀ ಚೈತ್ರಾ ಕುಂದಾಪುರ ಸುದ್ದಿಯಲ್ಲಿ ಇರುವುದೇಕೆ ಎನ್ನುವ ವಿವರ ಇಲ್ಲಿದೆ.
ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ಬಂಧಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪ್ರಕರಣದ ಹಿನ್ನೆಲೆ ಏನು ?
ಕರ್ನಾಟಕದಲ್ಲಿ ಈಚೆಗೆ ನಡೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಲ್ಲಿ ಸ್ಪರ್ಧಿಸಲು
ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎನ್ನುವವರಿಗೆ ಬರೋಬ್ಬರಿ ಏಳು
ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಕರ್ನಾಟಕದ ಕರಾವಳಿ
ಭಾಗದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರನ್ನು ಬಂಧಿಸಲಾಗಿದೆ.
ಅಲ್ಲದೇ ಇವರೊಂದಿಗೆ ಸಂಪರ್ಕ ಮತ್ತು ವಂಚನೆಯ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬೆಂಗಳೂರಿನ
ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಮಂಗಳವಾರ ತಡರಾತ್ರಿ ಬಂಧಿಸಿದ್ದಾರೆ.
ವಂಚನೆ ಪ್ರಕರಣದಲ್ಲಿ ಆರೋಪದ ಮೇಲೆ ಚೈತ್ರಾ ಕುಂದಾಪುರ ಹಾಗೂ ಇನ್ನಿಬ್ಬರನ್ನು ಮಂಗಳವಾರ
ತಡರಾತ್ರಿ ಉಡುಪಿಯ ಶ್ರೀಕೃಷ್ಣ ಮಠದ ಸಮೀಪದಲ್ಲಿ ( ಪಾರ್ಕಿಂಗ್ ತಾಣದಲ್ಲಿ) ಬಂಧಿಸಲಾಗಿದೆ.
ಈ ಪ್ರಕರಣದಲ್ಲಿ ಶ್ರೀಕಾಂತ್ ನಾಯಕ್ ಪೆಲತ್ತೂರ್ ಚೈತ್ರಾ ಅವರೊಂದಿಗೆ ಬಂಧಿಸಲಾಗಿದೆ.
ಕೈಗಾರಿಕೋದ್ಯಮಿ ಗೋವಿಂದ ಬಾಬು ಅವರಿಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಲಾಗಿತ್ತು.
ಅಲ್ಲದೇ ಬಿಲ್ಲವ ಸಮುದಾಯದ ಸಾಮಾಜಿಕ ಕಾರ್ಯಕರ್ತೆ ಎಂದು ಅವರನ್ನು ನಂಬಿಸಲಾಗಿತ್ತು.
ಈ ಮೂಲಕ ಬರೋಬ್ಬರಿ 7 ಕೋಟಿ ರೂಪಾಯಿಗಳನ್ನು ಪಡೆಯಲಾಗಿದೆ ಎನ್ನುವ ಆರೋಪ ಇದೀಗ ಕೇಳಿಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಬರೋಬ್ಬರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ನಾಯಕ್ ಅ ಗಗನ್ ಕಡೂರು ಮತ್ತು ಪ್ರಸಾದ್ ಬಂಧಿತರು.
ಯಾರಿ ಚೈತ್ರಾ ಕುಂದಾಪುರ ?
ಚೈತ್ರಾ ಕುಂದಾಪುರ ವಿವಾದಗಳಿಂದಲೇ ಹೆಚ್ಚು ಮುನ್ನಲೆಗೆ ಬಂದಿದ್ದರು.
ಬಲಪಂಥೀಯ ಕಾರ್ಯಕರ್ತರಾಗಿದ್ದ ಅವರು ಹಿಂದುತ್ವವಾದದಿಂದಲೇ ಜನಪ್ರಿಯರಾಗಿದ್ದಾರೆ.
ಅಲ್ಲದೇ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದರಿಂದಲೇ ಅವರ ಮೇಲೆ ಹಲವು ಪ್ರಕರಣಗಳು ದಾಖಲಾಗಿರುವುದೂ ಇದೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದಾರೆ.
ಚಿತ್ರಕೃಪೆ: ಸಾಮಾಜಿಕ ಜಾಲತಾಣ
Share your comments