1. ಸುದ್ದಿಗಳು

ಚುನಾವಣೆಗೆ ಮುನ್ನ ಉಚಿತ ಉಡಗೊರೆ ನೀಡಿದರೆ ಜೋಕೆ: ಚುನಾವಣಾ ಆಯೋಗ ಎಚ್ಚರಿಕೆ!

Hitesh
Hitesh
If free gifts are given before election: Election commission warning!

ಚುನಾವಣೆಗೆ ಕೆಲವೇ ದಿನಗಳಿರುವ ಹಿನ್ನೆಲೆಯಲ್ಲಿ ಚುನಾವಣೆ ಆಯೋಗವು ಸದ್ದಿಲ್ಲದೆ ಚುನಾವಣಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಈ ರಾಜ್ಯದಲ್ಲಿ ನಿರುದ್ಯೋಗಿ ಯುವಕರಿಗೆ ಸಿಗಲಿದೆ ಮಾಸಿಕ 2,500 ಸಾವಿರ! 

ಚುನಾವಣಾ ಆಯೋಗವು ಚುನಾವಣಾ ಪೂರ್ವಸಿದ್ಧತೆ ರಾಜ್ಯ ಮಟ್ಟದ ಸಭೆಯನ್ನು ನಡೆಸಿದ್ದು, ಕಾನೂನು ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಎಚ್ಚರಿಕೆಯನ್ನು ನೀಡಿದೆ.

ವಿವಿಧ ರಾಜಕೀಯ ಪಕ್ಷಗಳು ಜನಸಾಮಾನ್ಯರಿಗೆ ವಿವಿಧ ರೀತಿಯ ಉಚಿತ ಉಡುಗೊರೆ, ಆಮಿಷಗಳನ್ನು ಒಡ್ಡುತ್ತಿರುವುದು ಮಾಧ್ಯಮಗಳ ಮೂಲಕ ಕಂಡು ಬಂದಿರುವುದರಿಂದ, ಈ ಕುರಿತಂತೆ ಸಂಬಂಧಪಟ್ಟ ಇಲಾಖೆಯ ಕಾನೂನು , ನಿಯಮಗಳಂತೆ ಕ್ರಮವಹಿಸಿ

ಬಜೆಟ್ 2023: ಮಹಿಳೆಯರಿಗೆ ಉಳಿತಾಯ ಖಾತೆಯ ಮೂಲಕ 7.5% ಬಡ್ಡಿ! 

ಕಾನೂನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ತೆಗದುಕೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು  ರಾಜ್ಯದ ವಿವಿಧ ಇಲಾಖೆಗಳ  ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. 

ಮುಂಬರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯ ಪೂರ್ವ ಸಿದ್ದತೆಯ ಕುರಿತು ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆ ಹಮ್ಮಿಕೊಳ್ಳಲಾಗಿತ್ತು.  

ಸಭೆಯಲ್ಲಿ  ಮುಂಬರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯ ಕುರಿತು ಪೂರ್ವಸಿದ್ದತೆ ಮಾಡಿಕೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿಗಳು ಸೂಚನೆ ನೀಡಿದರು.

ಮತದಾರರಿಗೆ ಮದ್ಯಪಾನ ಸೇರಿದಂತೆ ವಿವಿಧ ರೀತಿಯ ಉಡುಗೂರೆಗಳ ಆಮಿಷಗಳನ್ನು ಕೂಪನ್‍ಗಳ ಮೂಲಕ ವಿತರಿಸುತ್ತಿರುವ ಬಗ್ಗೆ ಸಹ ಮಾಧ್ಯಮಗಳ ಮೂಲಕ ವರದಿಯಾಗುತ್ತಿದೆ. ಕಳೆದ ವರ್ಷದ ಈ ಸಮಯದಲ್ಲಿ ಮಾರಾಟವಾದ ಮದ್ಯ ಹಾಗೂ ಪ್ರಸ್ತುತ ಈಗ ಮಾರಾಟವಾಗುತ್ತಿರುವ ಮದ್ಯ  ಕುರಿತಂತೆ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಬೇಕು. ಅಂತರ ರಾಜ್ಯ ಚೆಕ್ ಪೋಸ್ಟ್‍ಗಳನ್ನು ತೆರೆಯಲು ಸೂಚಿಸಿದರು.

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿದೇನು,ಬಜೆಟ್‌ ಹೈಲೆಟ್ಸ್‌ ಇಲ್ಲಿದೆ!

ಸಮಾಜದಲ್ಲಿ ನಡೆಯುತ್ತಿರುವ ಆಮಿಷಗಳ ಕುರಿತಂತೆ ಸಂಬಂಧಿತ ಇಲಾಖೆಗಳು ತಮ್ಮಲ್ಲಿರುವ ಮಾಹಿತಿಯನ್ನು ಅಂತರ ಇಲಾಖಾ ಮಟ್ಟದಲ್ಲಿ ಹಂಚಿಕೊಳ್ಳುವ ಮೂಲಕ ಸುಗಮ ಚುನಾವಣೆಗೆ ಎಲ್ಲರೂ ಕರ್ತವ್ಯ ನಿರ್ವಹಿಸಬೇಕು.

ವಿವಿಧ ಇಲಾಖೆಗಳ ಮೂಲಕ ಸ್ವೀಕರಿಸಲಾಗುವ ನೋಂದಾಯಿತ ಪ್ರಕರಣಗಳ ಕುರಿತು ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳಲಿದೆ. ಹಣ ಮತ್ತು ಬಂಗಾರದಂತಹ ಬೆಲೆ ಬಾಳುವ ವಸ್ತುಗಳ ಸಾಗಣಿಕೆ ಮೇಲೆ ನಿಗಾವಹಿಸಬೇಕು.

ಮಾದಕ ವಸ್ತುಗಳ ಸಾಗಣಿಕೆ, ಮಾರಾಟದ ಮೇಲೆ ಕಣ್ಣಿಡಬೇಕು, ಇದಕ್ಕೆ ಸಂಬಂಧಿಸಿದಂತೆ ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ಇದಕ್ಕಾಗಿ ವಿಶೇಷ ನೂಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.

ಕೇಂದ್ರ ಬಜೆಟ್‌ 2023 ಮಹಿಳೆಯರಿಗೆ ಕಹಿಸುದ್ದಿ: ಚಿನ್ನ, ಬೆಳ್ಳಿ ದರ ತುಟ್ಟಿ! ಯಾವೆಲ್ಲ ವಸ್ತುಗಳ ಬೆಲೆ ಏರಿಕೆ, ಇಳಿಕೆ ಇಲ್ಲಿದೆ ವಿವರ

ಹಣದ ರೂಪದಲ್ಲಿ ಮತ್ತು ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳ ಮೂಲಕ ನಡೆಯುವ ಚಲಾವಣೆಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬೇಕು.

ಸಮಾಜಘಾತುಕ ಭಾಷಣ ಅಥವಾ ಸಮಾಜದ ನೆಮ್ಮದಿ ಕದಡುವ ಹಾಗೂ ದ್ವೇಷವನ್ನು ಹರಡುವ ಮಾತುಗಳು ಮತ್ತು ಅಂತಹ ಸಭೆಗಳ ಮೇಲೆ ನಿಗಾವಹಿಸಬೇಕು. ಆ ರೀತಿಯ ಘಟನೆಗಳು ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

 ಭಾರತ ಚುನಾವಣಾ ಆಯೋಗದ ಹಿರಿಯ ಉಪ ಚುನಾವಣಾ ಆಯುಕ್ತರ ಅಧ್ಯಕ್ಷತೆಯಲ್ಲಿ ದಿನಾಂಕ: 24.11.2022 ರಂದು ರಾಜ್ಯ ಹಾಗೂ ಕೇಂದ್ರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಕುರಿತು ತೆಗೆದುಕೊಂಡಿರುವ ಕ್ರಮ ಮತ್ತು ವರದಿಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ರವರು, ಆಯುಕ್ತರು ಅಬಕಾರಿ ಇಲಾಖೆ, ಆಯುಕ್ತರು ವಾಣಿಜ್ಯ ತೆರಿಗೆ, ರಾಜ್ಯ ಸರಕು ಮತ್ತು ಸೇವೆ ಇಲಾಖೆ, ಹೆಚ್ಚುವರಿ ನಿರ್ದೇಶಕರು(ತನಿಖೆ), ಆದಾಯ ತೆರಿಗೆ ಇಲಾಖೆ, ಉಪ ಆಯುಕ್ತರು, ಕೇಂದ್ರ ತೆರಿಗೆ ಮತ್ತು ಸುಂಕ ಇಲಾಖೆ, ಹೆಚ್ಚುವರಿ ನಿರ್ದೇಶಕರು, ರೆವಿನ್ಯೂ ಇಂಟಲಿಜೆನ್ಸ್, ಉಪ ನಿರ್ದೇಶಕರು

ಜಾರಿ ನಿರ್ದೇಶನಾಲಯ, ಬೆಂಗಳೂರು ವಲಯ, ವಲಯ ನಿರ್ದೇಶಕರು, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ಡೆಪ್ಯೂಟಿ ಇನ್ಸ್‍ಪೆಕ್ಟರ್ ಜನರಲ್, ಸಿಐಎಸ್‍ಎಫ್, ಸಹಾಯಕ ಭದ್ರತಾ ಆಯುಕ್ತರು, ರೈಲ್ವೆ ಪ್ರೋಟೆಕ್ಷನ್ ಪೋರ್ಸ್, ಜನರಲ್ ಮ್ಯಾನೇಜರ್, ಆರ್‍ಬಿಐ, ಡಿಜಿಎಂ, ಎಸ್‍ಎಲ್‍ಬಿಸಿ, ಜನರಲ್ ಮ್ಯಾನೇಜರ್, ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ನಿರ್ದೇಶಕರು, ಅಂಚೆ ಸೇವೆಗಳು, ಕರ್ನಾಟಕ ವೃತ್ತ ಸೇರಿದಂತೆ ಹಲವರು ಉಪಸ್ಥಿತರಿದ್ದರು.  

ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್‌: ಕೃಷಿ ಕ್ಷೇತ್ರಕ್ಕೆ ಉತ್ತೇಜನದ ನಿರೀಕ್ಷೆ    

Published On: 02 February 2023, 05:46 PM English Summary: If free gifts are given before election: Election commission warning!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.