ಕಲಬುರಗಿ ಮಹಾನಗರ ಪಾಲಿಕೆಯಿಂದ ಅನುಷ್ಠಾನಗೊಳಿಸುತ್ತಿರುವ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಮತ್ತು ಶೇ. 24.10, ಶೇ. 7.25 ಹಾಗೂ ಶೇ. 5 ಯೋಜನೆಗಳಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ/ ಅಲ್ಪಸಂಖ್ಯಾತರ ಹಾಗೂ ವಿಕಲಚೇತನ ಬಡ ಜನರ ಕಲ್ಯಾಣ ಕಾರ್ಯಕ್ರಮಗಳಡಿ ಪ್ರೋತ್ಸಾಹಧನ/ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳು ಅರ್ಜಿ ಪಡೆಯುವ ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು 2021ರ ಜೂನ್ 24ರ ಸಂಜೆ 4.30 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾದ ಸ್ನೇಹಲ್ ಸುಧಾಕರ ಲೋಖಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಅರ್ಹ ಫಲಾನುಭವಿಗಳು ಅರ್ಜಿ ಪಡೆಯುವ ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು 2021ರ ಏಪ್ರಿಲ್ 9 ರಿಂದ ಮೇ 10ರವರೆಗೆ ನಿಗದಿಪಡಿಸಲಾಗಿತ್ತು. ಆದರೆ ಕೊರೋನಾ ಕರ್ಫ್ಯೂ ಹಿನ್ನೆಲೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳು ಸ್ವೀಕೃತವಾಗದೇ ಇರುವ ಹಿನ್ನೆಲೆಯಲ್ಲಿ ಹಾಗೂ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021ರ ಜೂನ್ 24ರ ಸಂಜೆ 4.30 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ಶೇ. 24.10 ಶಾಖೆಯ ರೂಮ್ ನಂ. 45ನ್ನು ಸಂಪರ್ಕಿಸಬಹುದಾಗಿದೆ ಹಾಗೂ ಇ-ಮೇಲ್ ಐಡಿ klbformsubmission@gmail.com ಅಥವಾ http://www.kalaburagicity.mrc.gov.in/en/for ವೆಬ್‌ಸೈಟ್‌ದಿಂದ ಮಾಹಿತಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
Share your comments