1. ಸುದ್ದಿಗಳು

ಆಲಮಟ್ಟಿ ಜಲಾಶಯದ ಎತ್ತರ 519 ಮೀ. ದಿಂದ 524 ಮೀಟರ್ ಹೆಚ್ಚಿಸಲು ಪ್ರಸ್ತಾವನೆ

ಆಲಮಟ್ಟಿ ಜಲಾಶಯದ ಪ್ರಸ್ತುತವಿರುವ ಎತ್ತರ 519 ಮೀ. ದಿಂದ 524 ಮೀ. ಹೆಚ್ಚಳ ಕುರಿತಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಅವರು ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜ್ ಪರಿವೀಕ್ಷಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಆಣೆಕಟ್ಟು ಹೆಚ್ಚಳ ಕುರಿತಂತೆ ಕೇಂದ್ರ ಸರ್ಕಾರವೇ ಮಧ್ಯ ಪ್ರವೇಶಿಸಬೇಕೆಂದು ಕೋರಲಾಗಿದೆ ಎಂದರು.

ಮಹದಾಯಿ ಯೋಜನೆ ಅನುಷ್ಠಾನಕ್ಕೆ 800 ಕೋಟಿ ರೂ. ಮೊತ್ತದ  ಯೋಜನಾ ವರದಿ ತಯಾರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. ಕೊರೋನಾ ಹಾವಳಿ ಕಡಿಮೆಯಾದ ನಂತರ ತಾವು ದೆಹಲಿಗೆ ಹೋಗಿ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಇದರ ಅನುಮೋದನೆ ಪಡೆಯಲಾಗುವುದು ಎಂದರು.

ಕಳೆದ ಫೆಬ್ರವರಿ 6 ರಂದು ಜಲಸಂಪನ್ಮೂಲ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಮೇಲೆ ವಿಧಾನಮಂಡಲ ಅಧಿವೇಶನ, ತದನಂತರ ಕೊರೋನಾ ಲಾಕ್‍ಡೌನ್ ಪರಿಣಾಮ ರಾಜ್ಯದಾದ್ಯಂತ ಪ್ರವಾಸ ಮಾಡಲು ಸಾಧ್ಯವಾಗಲಿಲ್ಲ. ಇದೀಗ ಜಿಲ್ಲಾವಾರು ಪ್ರವಾಸ ಆರಂಭಿಸಿದ್ದು, ನೀರಾವರಿ ಯೋಜನೆಗಳ ಸಮಗ್ರ ಮಾಹಿತಿ ಪಡೆಯುತ್ತಿದ್ದೇನೆ. ಕಲಬುರಗಿ ವಲಯದ ಎಲ್ಲಾ ನೀರಾವರಿ ಯೋಜನೆಗಳನ್ನು ಹಂತ-ಹಂತವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.

ಜುಲೈ 15ರ ನಂತರ ಅಧಿಕಾರಿಗಳ ಸಭೆ: ಮುಂದಿನ 3 ವರ್ಷಗಳಲ್ಲಿ ರಾಜ್ಯದ ಆಣೆಕಟ್ಟುಗಳ ನಿರ್ವಹಣೆ, ಏತ ನೀರಾವರಿ ಯೋಜನೆ ಅನುμÁ್ಠನ ಮತ್ತು ನೀರಾವರಿ ಯೋಜನೆಗಳಿಗೆ ಅಧುನಿಕ ಸ್ಪರ್ಶ ನೀಡಲು ಹಾಗೂ ಮುಂದೆ ಹಾಕಿಕೊಳ್ಳಬೇಕಾದ ಯೋಜನೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲು ಜುಲೈ 15ರ ನಂತರ ಅಧಿಕಾರಿಗಳ ಸಭೆ ನಡೆಸಿ ರೂಪುರೇಷೆ ಸಿದ್ದಪಡಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ಮಹಾರಾಷ್ಟ ಸಿ.ಎಂ.ನೊಂದಿಗೆ ಚರ್ಚೆ: ಅಂತರ ರಾಜ್ಯ ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಮುಂದಿನ ವಾರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರೊಂದಿಗೆ ಸಭೆ ನಡೆಸಲಾಗುತ್ತಿದ್ದು, ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದರು.

Published On: 02 July 2020, 07:21 PM English Summary: increase Alamatti reservoir height proposal to central Govt

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.