ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ದರ, ಹಾಲಿನ ದರ ಹಾಗೂ ಮದ್ಯದ ದರ ಇದೀಗ ವಾಹನ ಖರೀದಿ ದರವೂ ಹೆಚ್ಚಳವಾಗುತ್ತಿದೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಆಲ್ಕೊಹಾಲಿನ ಬೆಲೆ ಏರಿಸಿದ ನಂತರ Indian National Congress - Karnataka ಸರ್ಕಾರ ಹಾಲಿನ ಬೆಲೆಯನ್ನೂ
ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರವು ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ. ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ
ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು. ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು.
ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು.
ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ ಎಂದಿದ್ದಾರೆ.
ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು.
ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ
ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ.
ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು
ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!!
ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ.
ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ.
ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಹೇಳಿದ್ದಾರೆ.
ಹಾಲು ದರ 3ರೂಪಾಯಿ ಹೆಚ್ಚಳ!
ಹಾಲು ದರವನ್ನು 3 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಹಾಲು ದರವನ್ನು ಹೆಚ್ಚಳ ಮಾಡುವುದಕ್ಕೆ ಮನವಿ ಮಾಡಿದ್ದವು.
ಹಾಲಿನ ದರದಲ್ಲಿ 5 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಮನವಿ ಮಾಡಲಾಗಿತ್ತಾದರೂ, 3ರೂಪಾಯಿ ಹೆಚ್ಚಳ ಮಾಡಲಾಗಿದೆ.
ಕಾಂಗ್ರೆಸ್ ಬೆಲೆ ಏರಿಕೆಯ ಬಗ್ಗೆಯೇ ಮಾತನಾಡಿ, ಇದೀಗ ಅಗತ್ಯ ವಸ್ತುಗಳ ಬೆಲೆ ಏರಿಕೆ
ಮಾಡುತ್ತಿರುವುದಕ್ಕೆ ಸರ್ವಾಜನಿಕರಿಂದ ವಿರೋಧ ವ್ಯಕ್ತವಾಗಿದೆ.
Image Credit: Pexels
@Siddaramaiah
@hdkumaraswamy
Share your comments