1. ಸುದ್ದಿಗಳು

ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ದುಪ್ಪಟ್ಟು ಹೆಚ್ಚಳ!

Hitesh
Hitesh
Increase in the honorarium of the president, vice president and members of Gram Panchayat!

ಸರ್ಕಾರವು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಸಿಹಿ ಸುದ್ದಿ ನೀಡಿದ್ದು, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಮಾಸಿಕ ಗೌರವಧನವನ್ನು (Monthly Honorarium) ಎರಡು ಪಟ್ಟು ಹೆಚ್ಚಳ ಮಾಡಿ ಆದೇಶ ಮಾಡಿದೆ.

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಆದೇಶಾನುಸಾರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಜಂಟಿ ಕಾರ್ಯದರ್ಶಿ ಎಂಎನ್‌ ಬಾನೊಳ್ಳಿ  ಅವರು ಆದೇಶಿಸಿದ್ದಾರೆ.  

ಈಚೆಗೆ ನಡೆದ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್‌ ಚುನಾವಣೆಯ ಸಂದರ್ಭದಲ್ಲಿಯೂ ಗೌರವ ಧನ ಹೆಚ್ಚಳ ಮಾಡುವ ಸಂಬಂಧ ಸುದೀರ್ಘ ಚರ್ಚೆ ನಡೆದಿತ್ತು.

ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ 3 ಸಾವಿರ ರೂಪಾಯಿ, ಉಪಾಧ್ಯಕ್ಷರಿಗೆ 2 ಸಾವಿರ ರೂ ಹಾಗೂ ಸದಸ್ಯರಿಗೆ 1 ಸಾವಿರ ರೂಪಾಯಿ ಮಾಸಿಕ ಗೌರವ ಧನ ನಿಗದಿಪಡಿಸಲಾಗಿತ್ತು.  

ಗೌರವಧನವನ್ನು ಪರಿಷ್ಕರಿಸಲಾಗಿದೆ. ಹೊಸ ಆದೇಶದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ 6 ಸಾವಿರ ರೂಪಾಯಿ, ಉಪಾಧ್ಯಕ್ಷರಿಗೆ 4 ಸಾವಿರ ರೂ. ಹಾಗೂ ಸದಸ್ಯರಿಗೆ 2 ಸಾವಿರ ರೂ. ಗೌರವ ಧನ ನಿಗದಿ ಪಡಿಸಲಾಗಿದೆ.  

ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ಗೌರವಧನ ಹೆಚ್ಚಳ ಮಾಡುವ ಸಂಬಂಧ ಶೀಘ್ರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದರು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಡೆದ ಅಧಿವೇಶನದ ವೇಳೆ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಪರಿಷತ್‌ ಸದಸ್ಯ ಸುನೀಲ್ ಗೌಡ ಪಾಟೀಲ್‌ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ್ದರು.

ಸುನೀಲ್‌ ಗೌಡ ಪಾಟೀಲ್‌, ಗ್ರಾಮ ಪಂಚಾಯಿತಿ ಸದಸ್ಯರಿಗೆ ಕನಿಷ್ಠ ಕೂಲಿಗಿಂತ ಕಡಿಮೆ ಗೌರವಧನ ನೀಡಲಾಗುತ್ತಿದ್ದು, ಇವರ ಗೌರವ ಧನ ಹೆಚ್ಚಳ ಮಾಡಬೇಕು. ಅಲ್ಲದೇ ಈ ಗೌರವಧನವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಅವರೆಲ್ಲರಿಗೂ ಉಚಿತ ಬಸ್ ಪಾಸ್‌ ನೀಡಬೇಕು ಎಂದು ಆಗ್ರಹಿಸಿದ್ದರು.  

ಸದ್ಯ ಸರ್ಕಾರವು ಚುನಾವಣೆಯ ಸಮೀಪದಲ್ಲಿದ್ದು, ಕೆಲವೇ ತಿಂಗಳು ಇರುವಾಗ ಸರ್ಕಾರದ ಈ ನಿರ್ಧಾರ ಮಹತ್ವಪಡೆದುಕೊಂಡಿದೆ.   

Published On: 19 December 2022, 10:21 AM English Summary: Increase in the honorarium of the president, vice president and members of Gram Panchayat!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.