1. ಸುದ್ದಿಗಳು

ನಿರುದ್ಯೋಗಿಗಳಿಗೆ ಸಂತಸದ ಸುದ್ದಿ ಜನವರಿ 21 ರಂದು ಉದ್ಯೋಗ ಮೇಳ

Job fair

ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗಿಗಳಿಗೆ ಇಲ್ಲಿದೆ ಸಂತಸದ ಸುದ್ದಿ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಕಲಬುರಗಿ ನಗರದ ಎಂ.ಎಸ್.ಕೆ.ಮಿಲ್ ರಸ್ತೆಯ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆ ಇರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜನವರಿ 21ರಂದು ಬೆಳಗಿನ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. 

 ಈ ಉದ್ಯೋಗ ಮೇಳದಲ್ಲಿ ರಾಜ್ಯದ 10ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐಟಿಐ, ಡಿಪ್ಲೋಮಾ, ಪದವೀಧರರು ಹಾಗೂ ಸ್ನಾತಕೋತ್ತರ ಪದವೀಧರ ವಿದ್ಯಾರ್ಹತೆಯುಳ್ಳ ಆಸಕ್ತ ಅಭ್ಯರ್ಥಿಗಳು  ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗಪಡೆದುಕೊಳ್ಳಬೇಕು.  

ಇದನ್ನೂ ಓದಿ: ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಉದ್ಯೋಗ ಮೇಳ

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846ಗೆ ಸಂಪರ್ಕಿಸಲು ಕೋರಲಾಗಿದೆ.

Published On: 13 January 2021, 01:13 PM English Summary: job fair in kalaburgi

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.