1. ಸುದ್ದಿಗಳು

Karaga ಬೆಂಗಳೂರಿನಲ್ಲಿ ಕರಗ ಮಹೋತ್ಸವ ಸಂಭ್ರಮ: ಸಾವಿರಾರು ಜನ ಸಾಕ್ಷಿ

Hitesh
Hitesh
Karaga Mahotsava celebrations in Bengaluru: Thousands witness

ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಅಗ್ರಿನ್ಯೂಸ್‌ ಪರಿಚಯಿಸಿದ್ದು, ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.    

1. ಬೆಂಗಳೂರಿನಲ್ಲಿ ಕರಗ ಮಹೋತ್ಸವ ಸಂಭ್ರಮ: ಸಾವಿರಾರು ಜನ ಸಾಕ್ಷಿ
2. ಕರಗ ಮಹೋತ್ಸವದಲ್ಲಿ ಬೆಂಕಿ ಅವಘಡ: ವಾಹನಗಳಿಗೆ ಬೆಂಕಿ
3. ರಾಜ್ಯದಲ್ಲಿ ಆಲಿಕಲ್ಲು ಮಳೆ ಸಾಧ್ಯತೆ: ಎಚ್ಚರಿಕೆ
4. ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಆರಂಭ!
5. ಸರ್ಕಾರಿ ನೌಕರರಿಗೆ ಇನ್ನೊಂದು ಬಂಪರ್‌ ಸುದ್ದಿ
6. ಚಿನ್ನ ಖರೀದಿದಾರರಿಗೆ ಸಿಹಿಸುದ್ದಿ: ಚಿನ್ನದ ಬೆಲೆ ಇಳಿಕೆ 

1. ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವು ಅತ್ಯಂತ ಸಂಭ್ರಮದಿಂದ ಗುರುವಾರ ರಾತ್ರಿ ನೆರವೇರಿತು.

ತಿಗರಳಪೇಟೆ, ನಗರ್ತರಪೇಟೆ, ಕಬ್ಬನ್‌ಪೇಟೆ, ಗಾಣಿಗರ ಪೇಟೆ, ದೊಡ್ಡಪೇಟೆ ಸೇರಿದಂತೆ ಕರಗ ಶಕ್ತ್ಯೋತ್ಸವ ಸಾಗುವ ಬೆಂಗಳೂರಿನ ಪ್ರಮುಖ ಬೀದಿಗಳಲ್ಲಿ ಸಾವಿರಾರು ಜನ ಸೇರಿದ್ದರು.

ಗುರುವಾರ ತಡರಾತ್ರಿ 2 ಗಂಟೆಗೆ ಹೊರಟ ಕರಗವು ನಗರದ ವಿವಿಧ ಭಾಗಗಳಲ್ಲಿ ಸಾಗಿ ಶುಕ್ರವಾರ ಮುಂಜಾನೆ 9 ಗಂಟೆ ವೇಳೆಗೆ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ದೇವಾಲಯಕ್ಕೆ ತಲುಪಿತು.

---------------------- 

----------------------
2. ಬೆಂಗಳೂರಿನ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ಕರಗ ವಿಶೇಷ ಪೂಜಾ ವಿಧಿವಿಧಾನದ ಸಂದರ್ಭದಲ್ಲಿ ಬೆಂಕಿ ಅವಘಡ ಸಂಭವಿಸಿರುವುದು ವರದಿ ಆಗಿದೆ.

ಭಕ್ತರು ಅಪಾರ ಪ್ರಮಾಣದ ಕರ್ಪೂರವನ್ನು ಬಳಸಿ ಪ್ರಾರ್ಥನೆ ಸಲ್ಲಿಸಿದ ವೇಳೆ ಹಲವು ಬೈಕ್‌ಗಳಿಗೆ ಬೆಂಕಿ ತಗುಲಿದೆ.

ಬೆಂಕಿ ನಂದಿಸುವಲ್ಲಿ ಸ್ಥಳೀಯರು ಹಾಗೂ ಪೊಲೀಸರು ಯಶಸ್ವಿಯಾಗಿದ್ದಾರೆ.  
------------------------

3. ರಾಜ್ಯದಲ್ಲಿ ಆಲಿಕಲ್ಲು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏ.8ರ ವರೆಗೆ ಉತ್ತರ ಒಳನಾಡಿನ ಗದಗ, ಬೆಳಗಾವಿ, ಕೊಪ್ಪಳ, ಹಾವೇರಿ, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ,

ರಾಯಚೂರು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು,

ಬಳ್ಳಾರಿ, ತುಮಕೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಹಲವು ಕಡೆಗಳಲ್ಲಿ ಗುಡುಗು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಯಾದಗಿರಿ ಮತ್ತು ಬೀದರ್‌ ಜಿಲ್ಲೆಗಳ ವಿವಿಧೆಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
------------------------ 

Rain

4.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2023–24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ರಾಜ್ಯದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರಿಂದ ಆರಂಭವಾಗಲಿವೆ.

ಮೇ 31 ರಂದು ರಾಜ್ಯದೆಲ್ಲಡೆ ಶಾಲಾ ಪ್ರಾರಂಭೋತ್ಸವ ಹಮ್ಮಿಕೊಳ್ಳಬೇಕು. ಜೂನ್‌ 30ರ ಒಳಗೆ ಪ್ರವೇಶ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ಇನ್ನು ಈ ಬಾರಿ ಮೇ 29ರಿಂದ ಅ.7ರವರೆಗೆ ಮೊದಲ ಅವಧಿಯ ತರಗತಿಗಳು ನಡೆಯಲಿವೆ.

ಅ.8 ರಿಂದ 24ರವರೆಗೆ ದಸರಾ ರಜೆ ನೀಡಲಾಗುತ್ತದೆ. ಅ.25ರಿಂದ 2024ರ ಏಪ್ರಿಲ್‌ 10 ವರೆಗೆ ಎರಡನೇ ಅವಧಿಯ ತರಗತಿಗಳು ನಡೆಯಲಿವೆ.
------------------------

5. ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಹಣಕಾಸು ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

ಜನವರಿಯಿಂದ ಜಾರಿಗೆ ಬರಲಿರುವ ಈ ತುಟ್ಟಿ ಭತ್ಯೆಯಲ್ಲಿ ಶೇಕಡಾ 4 ರಷ್ಟು ಹೆಚ್ಚಳಕ್ಕೆ ಸರ್ಕಾರವು ಅನುಮೋದನೆಯನ್ನು ನೀಡಿದೆ.

ಇದರೊಂದಿಗೆ ಎಲ್ಲ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಇದೀಗ ಶೇ.42 ರಷ್ಟು ತುಟ್ಟಿಭತ್ಯೆಯನ್ನು ಪಡೆದುಕೊಳ್ಳಲಿದ್ದಾರೆ.
------------------------
6. ಭಾರತೀಯ ಬುಲಿಯನ್ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದರೆ, ಬೆಳ್ಳಿ ಬೆಲೆ ಹೆಚ್ಚಾಗಿದೆ.

ಚಿನ್ನದ ಬೆಲೆ 10 ಗ್ರಾಂಗೆ 60 ಸಾವಿರ ರೂಪಾಯಿ ಮೀರಿದೆ. ಬೆಳ್ಳಿ ಬೆಲೆ ಕೆ.ಜಿ.ಗೆ 73 ಸಾವಿರ ರೂ.ಗೂ ಅಧಿಕವಾಗಿದೆ.

24-ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಗುರುವಾರ ಸಂಜೆ 10 ಗ್ರಾಂಗೆ 60,781 ರೂ ಇತ್ತು.

ಇನ್ನು ಶುಕ್ರವಾರ ಚಿನ್ನದ ಬೆಲೆ 60575ಕ್ಕೆ ಇಳಿದಿರುವುದು ವರದಿ ಆಗಿದೆ.  

Published On: 07 April 2023, 03:09 PM English Summary: Karaga Mahotsava celebrations in Bengaluru: Thousands witness

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.