1. ಸುದ್ದಿಗಳು

ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ 14 ಹೊಸ ಯೋಜನೆ ಘೋಷಿಸಿ ಬಂಪರ್ ಕೊಡುಗೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

Karnataka CM Basavaraj Bommai

ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಭಾಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ವಿವಿಧ ಜನ ಸಮುದಾಯಗಳನ್ನು ಕೇಂದ್ರೀಕರಿಸಿದ 14 ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ.  ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಭಾನುವಾರ ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅಮೃತ ಮಹೋತ್ಸವದ ನೆನಪಿಗೆ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಸಂಖ್ಯಾತರು ತ್ಯಾಗ ಮತ್ತು ಬಲಿದಾನ ಮಾಡಿದ್ದಾರೆ. ಮಹಾತ್ಮಾ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ವಲ್ಲಭಬಾಯಿ ಪಟೇಲ್, ಭಗತ್ ಸಿಂಗ್, ಮೌಲನಾ ಅಬುಲ್ ಕಲಾಂ ಜವಾಹರ್ ಲಾಲ್ ನೆಹರೂ ಮೊದಲಾದ ಮಹನೀಯರ ಹೋರಾಟಗಳನ್ನು ಸ್ಮರಿಸಿದ ನಂತರ ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಅಮೃತ ಗ್ರಾಮ ಪಂಚಾಯತಿಗಳು

ಅಮೃತ ಗ್ರಾಮ ಪಂಚಾಯತಿ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತಿಗಳನ್ನು ಸಮಗ್ರವಾಗಿ ಅಭಿವೃದ್ಧಇಪಡಿಸಲಾಗುವುದು. ಆಯ್ದ 750 ಗ್ರಾಮ ಪಂಚಾಯತಿಗಳಲ್ಲಿ ಬೀದಿ ದೀಪಗಳು, ಪ್ರತಿ ಮನೆಗೆ ಕುಡಿಯುವ ನೀರಿನ ಸರಬರಾಜು, ಶೇ.100 ರಷ್ಟು ಘನತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಸರ್ಜಿಸುವುದು, ಸೌರವಿದ್ಯುತ್‌ ಅಳವಡಿಕೆ, ಡಿಜಿಟಲ್ ಲೈಬ್ರರಿಗಳೊಂದಿಗೆ ಸುಸಜ್ಜಿತವಾದ ಶಾಲೆಗಳನ್ನು ಸ್ಥಾಪಿಸಿ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಯೋಜನೆ ಅನುಷ್ಠಾನಗೊಳಿಸಲಾಗುವುದು.

ಅಮೃತ ಗ್ರಾಮೀಣ ವಸತಿ ಯೋಜನೆ

ಅಮೃತ ಗ್ರಾಮೀಣ ವಸತಿ ಯೋಜನೆಯಡಿಯಲ್ಲಿ  750 ಗ್ರಾಮ ಪಂಚಾಯತಿಗಳಲ್ಲಿ ವಸತಿ ರಹಿತ ಮತ್ತು ಆಶಯರಹಿತರನ್ನು ಗುರುತಿಸಿ ಸರ್ವರಿಗೂ ವಸತಿ ಕಲ್ಪಿಸುವ ಯೋಜನೆ ಅನುಷ್ಠಾನಗೊಳಿಸಲಾಗುವುದು.

ಅಮೃತ ರೈತ ಉತ್ಪಾದಕ ಸಂಸ್ಥೆಗಳು

ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಿ, ಪ್ರತಿ ಸಂಸ್ಥೆಗೆ 30 ಲಕ್ಷ ರೂ. ನಂತೆ ಮೂರು ವರ್ಷದ ಅವಧಿಗೆ 225 ಕೋಟಿ ರೂ. ಅನುದಾನ ನೀಡಲಾಗುವುದು.

ಅಮೃತ ಶಾಲಾ ಸೌಲಭ್ಯ ಯೋಜನೆ

ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಇತ್ಯಾದಿ ಸಮಗ್ರ ಸೌಲಭ್ಯ ಒದಗಿಸಲು ತಲಾ 10 ಲಕ್ಷ ರೂ.ಗಳಂತೆ 75 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು.

ಅಮೃತ ಅಂಗನವಾಡಿ ಕೇಂದ್ರಗಳು

ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ.. ಮೇಲ್ದರ್ಜೆಗೇರಿಸಲು ಪ್ರತಿ ಅಂಗನವಾಡಿಗೆ 1 ಲಕ್ಷ ರೂ.ನಂತೆ 7.5 ಕೋಟಿ ರೂ. ಹಣ ವಿನಿಯೋಗಿಸಲಾಗುವುದು.

ಅಮೃತ ಸ್ವಸಹಾಯ ಕಿರು ಉದ್ದಿಮೆಗಳು

ಆಯ್ದ 7,500 ಸ್ವಸಹಾಯ ಗುಂಪುಗಳನ್ನು ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸಲು ತಲಾ 1 ಲಕ್ಷ ರೂ. ನಂತೆ 75 ಕೋಟಿ ರೂ. ಬೀಜ ಧನವನ್ನು (ಸೀಡ್‌ಮನಿ) ಒದಗಿಸಲಾಗುವುದು.

ಅಮೃತ ಸಮುದಾಯ ಅಭಿವೃದ್ಧಿ ಯೋಜನೆ

ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ಆಯ್ದ 750 ರಚನಾತ್ಮಕ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಗುರುತಿಸಿ ಸಾಮುದಾಯಿಕ ಪ್ರೇರೇಪಿಸಲಾಗುವುದು. ಈ ಯೋಜನೆಯಲ್ಲಿ ವಿದ್ಯಾರ್ಥಿಗಳನ್ನು ಗುರುತಿಸಿ, ಅವರನ್ನು ತೊಡಗಿಸಿಕೊಂಡು ಸಮುದಾಯದ ಅಭಿವೃದ್ಧಿ ಮಾಡುವುದು ಸಿಎಂ ಬೊಮ್ಮಾಯಿ ಅವರ ಗುರಿಯಾಗಿದೆ. ಕೊರೊನಾ ವೈರಸ್ ಸಂಕಷ್ಟದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಗೆ ಕಾಯಕಲ್ಪ ಕೊಡಲು ಯೋಜನೆ ಘೋಷಣೆ ಮಾಡಿದ್ದಾರೆ.

ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆ

ಆಯ್ದ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಸೌಕರ್ಯಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ತಲಾ 20 ಲಕ್ಷ ರೂ.ಗಳಂತೆ 150 ಕೋಟಿ ರೂ. ವೆಚ್ಚ ಮಾಡಲಾಗುವುದು.

ಅಮೃತ ಕೌಶಲ್ಯ ತರಬೇತಿ ಯೋಜನೆ

ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳ 75 ಸಾವಿರ ಯುವಕ ಯುವತಿಯರ ಕೌಶಲ್ಯಾಭಿವೃದ್ಧಿಗೆ 2 ವರ್ಷಗಳ ತರಬೇತಿ ಯೋಜನೆಯನ್ನು 12 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.

ಅಮೃತ ಕ್ರೀಡಾ ದತ್ತು ಯೋಜನೆ

ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತದ ಮತ್ತು ಕರ್ನಾಟಕದ ಕ್ರೀಡಾ ಪಟುಗಳ ಸಾಧನೆ ಗಮನಾರ್ಹವಾದುದು. ಮುಂದಿನ ಪ್ಯಾರೀಸ್ ಒಲಂಪಿಕ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ಪದಕ ವಿಜೇತ ಸಾಮರ್ಥ್ಯವುಳ್ಳ ಆಯ್ದ 75 ಕ್ರೀಡಾಪಟುಗಳನ್ನು ರೂಪಿಸಲು ಅಗತ್ಯವಾದ ತರಬೇತಿ ಮತ್ತು ಪ್ರೋತ್ಸಾಹ ನೀಡಲು ಅಮೃತ ಕ್ರೀಡಾ ದತ್ತು ಯೋಜನೆ ಅನುಷ್ಠಾನಗೊಳಿಸಲಾಗುವುದು

ಅಮೃತ ನಿರ್ಮಲ ನಗರ

ನಗರ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಿಕೊಳ್ಳಲು ಅಮೃತ ನಿರ್ಮಲ ನಗರ ಯೋಜನೆ ರೂಪಿಸಿ ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂ. ನಂತೆ 75 ಕೋಟಿ ರೂ. ಗಳನ್ನು ಒದಗಿಸುವ ಘೊಷಣೆಯನ್ನು ಸಿಎಂ ಬೊಮ್ಮಾಯಿ ಮಾಡಿದ್ದಾರೆ. ಈ ಯೋಜನೆಯೊಂದಿಗೆ ಅಮೃತ ಶಾಲಾ ಯೋಜನೆಯನ್ನೂ ಘೋಷಣೆ ಮಾಡಿದ್ದಾರೆ.

Published On: 15 August 2021, 12:42 PM English Summary: Karnataka CM announced 14 schemes on Independence Day

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.