1. ಸುದ್ದಿಗಳು

30 ಲಕ್ಷ ರೈತರಿಗೆ 20 ಸಾವಿರ ಕೋಟಿ ರೂಪಾಯಿ ಕೃಷಿ ಸಾಲ ವಿತರಣೆ ಗುರಿ- ಯಡಿಯೂರಪ್ಪ

C.M Yadiyurappa

ಮುಂದಿನ ವರ್ಷ 30 ಲಕ್ಷ ರೈತರಿಗೆ 20 ಸಾವಿರ ಕೋಟಿ ಕೃಷಿ ಸಾಲ (Agri loan) ವಿತರಿಸುವ ಗುರಿ ಹೊಂದಲಾಗಿದ್ದು, ಅದಕ್ಕೆ ಅಗತ್ಯವಾದ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(CM B.S. Yadiyurappa) ಸೂಚಿಸಿದರು.

ಅವರು ರಾಜ್ಯ ಸರ್ಕಾರ ಒಂದು ವರ್ಷ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ಹೊರತಂದ  ಸಹಕಾರದ ಪ್ರಗತಿ-2020 ಸಾಧನೆಗಳ ಕಿರುಹೊತ್ತಿಗೆ(Booklet of the year achievement) ಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಪ್ರಸಕ್ತ ಸಾಲಿನಲ್ಲಿ ರೈತರಿಗೆ 14500 ಕೋಟಿ ರೂಪಾಯಿ ಕೃಷಿ ಸಾಲ ನೀಡುವ ಗುರಿ ಇದೆ. ಈಗಾಗಲೇ 8,50, ಲಕ್ಷ ರೈತರಿಗೆ ರೂ.5,600 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ರೈತರಿಗೆ ಕೃಷಿ ಚಟುವಟಿಕೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಮಾತನಾಡಿ, ಈಗಾಗಲೇ 25 ಜಿಲ್ಲೆಗಳಿಗೆ ಭೇಟಿ ನೀಡಿ ಸ್ಥಿತಿಗತಿಗಳನ್ನು ಅರಿತಿದ್ದೇನೆ. ಪ್ರತಿ ಭೇಟಿ ವೇಳೆಯೂ ರೈತರ (farmers) ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಪ್ರಸಕ್ತ ಬಾರಿ ರೈತರಿಗೆ ಮಧ್ಯಮಾವಧಿ, ಅಲ್ಪಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲವಾಗಿ 14500 ಕೋಟಿ ರೂಪಾಯಿ ಸಾಲ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಚಾಲನೆ ನೀಡಲಾಗಿದ್ದು, ಈಗಾಗಲೇ 8,50,000 ರೈತರಿಗೆ ರೂ.5,600 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

 

Published On: 26 July 2020, 06:32 PM English Summary: karnataka govt 20 crore farm loan target next year

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.