1. ಸುದ್ದಿಗಳು

ಸ್ವಯಂ ಉದ್ಯೋಗಕ್ಕೆ ಸಾಲ ನೀಡಲು ಸರ್ಕಾರದಿಂದ ಅರ್ಜಿ ಆಹ್ವಾನ..ಇಂದೇ ಅರ್ಜಿ ಸಲ್ಲಿಸಿ

Maltesh
Maltesh
karnataka self business loan how to apply

ಅಲ್ಪಸಂಖ್ಯಾತ ವರ್ಗದ ಕುಲಕಸುಬುದಾರರಿಗೆ ತರಬೇತಿ ನೀಡಿ, ಅವರು ತಮ್ಮ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ಧಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಅಥವಾ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿಗೊಳಿಸುವ ಸಲುವಾಗಿ, ನಿಗಮದಿಂದ ಶೇ. 4 ರ ಬಡ್ಡಿದರದಲ್ಲಿ ರೂ. 50,000/-ದವರೆಗೆ ಸಾಲಸೌಲಭ್ಯವನ್ನು ಕಲ್ಪಿಸಲಾಗುತ್ತದೆ.ಕೆ.ಜಿ ಜೇನು ತುಪ್ಪಕ್ಕೆ 8.8 ಲಕ್ಷ ಎಂದರೆ ನೀವು ನಂಬುತ್ತೀರಾ? ಹೌದು! ಇಲ್ಲಿದೆ “ಮೇ 20 - ವಿಶ್ವ ಜೇನು ದಿನ”ದ ನಿಮಿತ್ತ ಕುತೂಹಲಕಾರಿ ಲೇಖನ

ಇದರಲ್ಲಿ, ಶೇ. 50ರಷ್ಟು ಸಾಲವನ್ನು 36 ತಿಂಗಳಿನಲ್ಲಿ ಫಲಾನುಭವಿಯು ಮರುಪಾವತಿ ಮಾಡಿದಲ್ಲಿ, ಉಳಿದ ಶೇ. 50ರಷ್ಟು ಹಣವನ್ನು ‘ಬ್ಯಾಕ್‌ಎಂಡ್ ಸಹಾಯಧನ’ವನ್ನಾಗಿ ಪರಿಗಣಿಸಲಾಗುತ್ತದೆ. ಫಲಾನುಭವಿಯು ತಾನು ಪಡೆದ ಸಾಲವನ್ನು 36 ತಿಂಗಳೊಳಗಾಗಿ ಮರುಪಾವತಿ ಮಾಡಲು ವಿಫಲರಾದಲ್ಲಿ ಶೇ. 50ರಷ್ಟು ಬ್ಯಾಕ್‌ಎಂಡ್ ಸಹಾಯಧನವನ್ನು ಸಹ ಸಾಲವೆಂದು ಪರಿಗಣಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-Jul-2022

ಅರ್ಹತೆ

ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.ಗುಡ್‌ನ್ಯೂಸ್‌: 5 ಲಕ್ಷ ರೈತರಿಗೆ ₹749 ಕೋಟಿ ಬೆಳೆ ವಿಮೆ ಇತ್ಯರ್ಥ..!

ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.

ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 3,50,000/- ಗಿಂತ ಕಡಿಮೆ ಇರಬೇಕು.

ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು.

ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.ಗುಡುಗು-ಬಿರುಗಾಳಿ ಸಮೇತ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಸೂಚನೆ!

ಆಟೋ ರಿಕ್ಷಾ /ಟ್ಯಾಕ್ಸಿ /ಸರಕು ವಾಹನಗಳ ಖರೀದಿಗೆ ಸಹಾಯಧನ

ಸದರಿ ಯೋಜನೆಯಡಿ ಬ್ಯಾಂಕುಗಳಿಂದ ಮಂಜೂರಾತಿ ನೀಡಿದ / ಪಡೆದ ಆಟೋ ರಿಕ್ಷಾ /ಟ್ಯಾಕ್ಸಿ /ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ 33 ರಷ್ಟು ಅಥವಾ ಗರಿಷ್ಠ ರೂ. 2,50,000/- ರ ವರೆಗೆ ಸಹಾಯಧನ ನೀಡಲಾಗುತ್ತದೆ. ವಾಹನದ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದುಕೊಂಡ ಬಗ್ಗೆ ಬ್ಯಾಂಕ್ ಪತ್ರವನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-Jul-2022

ಸ್ವಯಂ ಉದ್ಯೋಗ ಯೋಜನೆ

ಈ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಸೇವಾ ಕ್ಷೇತ, ಕೃಷಿ ಆಧಾರಿತ ಚಟುವಟಿಕೆಗಳು ಮುಂತಾದಹುಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಓದಗಿಸಲಾಗುವುದು. ಘಟಕ ವೆಚ್ಚದ ಶೇ.33 ಅಥವಾ ಗರಿಷ್ಠ ಮಿತಿ ರೂ.1.00 ಲಕ್ಷದ ಸಹಾಯಧನ ನೀಡಲಾಗುಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-Jul-2022ಬ್ರೇಕಿಂಗ್‌: ರಾಜ್ಯದ ಜನತೆಗೆ ಕರೆಂಟ್‌ ಶಾಕ್‌: ಜುಲೈ 1ರಿಂದ ವಿದ್ಯುತ್‌ ದರ ಏರಿಕೆ!

Published On: 29 June 2022, 11:39 AM English Summary: karnataka self business loan how to apply

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.