ರಾಜ್ಯದಲ್ಲಿ ಕಳೆದ ಮೂರು ತಿಂಗಳಿಂದ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು,
ಈಗಾಗಲೇ ಸಾವಿರಾರು ಜಾನುವಾರುಗಳು ಸಾವನ್ನಪ್ಪಿವೆ. ಆದರೆ, ಜಾನುವಾರುಗಳಿಗೆ ಲಸಿಕಾಕರಣ ಮಾಡಲು ಸಿಬ್ಬಂದಿ ಕೊರತೆ ಎದುರಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ನಮಗೆ ವಧು ಸಿಗ್ತಿಲ್ಲ; ಜಾಗೃತಿ ಮೂಡಿಸಿ: ತಹಶೀಲ್ದಾರ್ಗೆ ಯುವ ರೈತರ ಮನವಿ!
ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಪ್ರಭು ಚವ್ಹಾಣ ಅವರ ನೇತೃತ್ವದಲ್ಲಿ ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಗೋಶಾಲೆಗಳ ಅಭಿವೃದ್ಧಿ ಹಾಗೂ ಜಾನುವಾರುಗಳಲ್ಲಿ ಕಂಡು ಬಂದಿರುವ ಚರ್ಮಗಂಟು ರೋಗವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಸಚಿವರ ಪ್ರಶ್ನಿಸಿದರು.
ಚರ್ಮಗಂಟು ರೋಗದ ಉಲ್ಬಣದಿಂದ ಜಾನುವಾರುಗಳ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಅಧಿಕಾರಿಗಳು ನಿಯಂತ್ರಣ ಏಕೆ ಮುಂದಾಗುತ್ತಿಲ್ಲ ಎಂದು ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ: ಕ್ರಿಮಿನಾಶಕ ಸಿಂಪಡಣೆಗೆ 10 ಕೋಟಿ ಅನುದಾನ; ಸಿ.ಎಂ ಬೊಮ್ಮಾಯಿ
ರಾಜ್ಯದ ಗಡಿಭಾಗದಲ್ಲಿ ಚರ್ಮಗಂಟು ರೋಗದ ವೈರಾಣುಗಳು ತೀವ್ರಗತಿಯಲ್ಲಿ ಹರಡುತ್ತಿರುವುದರಿಂದ ಜಾನುವಾರುಗಳ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ.
ಆದರೆ, ಲಸಿಕೆ ಹಾಕಲು ಸಿಬ್ಬಂದಿ ಸಾಲುತ್ತಿಲ್ಲ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ರಸಗೊಬ್ಬರ ಕೊರತೆಯಿಂದ ಆಹಾರ ಬಿಕ್ಕಟ್ಟು: ಪ್ರಧಾನಿ ಮೋದಿ ಎಚ್ಚರಿಕೆ
ಇಲಾಖೆ ನಿರ್ದೇಶಕ ಡಾ.ಮಂಜುನಾಥ್ ಪಾಳೇಗಾರ್ ಅವರು ಮಾತನಾಡಿ, ರಾಜ್ಯದಲ್ಲಿ ಇಲ್ಲಿಯವರೆಗೆ ಚರ್ಮಗಂಟು
ರೋಗ ತಡೆಗೆ 51 ಲಕ್ಷ ಡೋಸ್ಲಸಿಕೆ ನೀಡಲಾಗಿದೆ. ಆದರೆ ಸಿಬ್ಬಂದಿ ಕೊರತೆ ಇರುವುದರಿಂದ ಲಸಿಕಾಕರಣ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂದು ವಿವರಿಸಿದರು.
Elephant Task Force: ರಾಜ್ಯದಲ್ಲಿ ಮನುಷ್ಯ- ಕಾಡಾನೆ ಸಂಘರ್ಷ ತಡೆಗೆ ನಾಲ್ಕು ಜಿಲ್ಲೆಗಳಲ್ಲಿ ಟಾಸ್ಕ್ ಪೋರ್ಸ್ ರಚನೆ
ಇಲಾಖೆಯ ಕಾರ್ಯದರ್ಶಿ ಡಾ.ಸಲ್ಮಾ ಕೆ.ಫಾಹಿಮಾ ಅವರು ಮಾತನಾಡಿ, ಚರ್ಮಗಂಟು ರೋಗ ಮತ್ತು ಕಾಲುಬಾಯಿ ರೋಗ ಲಸಿಕೆ ನೀಡುವ
ಪ್ರಕ್ರಿಯೆಗೆ ಪಶುವೈದ್ಯ ವಿದ್ಯಾರ್ಥಿಗಳು ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳನ್ನು ಒದಗಿಸುವಂತೆ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿ ಡಾ.ವೀರಣ್ಣ ಅವರಿಗೆ ನಿರ್ದೇಶನ ನೀಡಿದರು.
ಡಾ. ವೀರಣ್ಣ ಅವರು ಮಾತನಾಡಿ, ಈಗಾಗಲೇ ಪಶುವೈದ್ಯ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳನ್ನು ಲಸಿಕಾಕರಣ ಮತ್ತು ರೋಗ ನಿಯಂತ್ರಣ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ತಿಳಿಸಿದರು.
Share your comments