1. ಸುದ್ದಿಗಳು

ಅಡಿಕೆಗೆ ಎಲೆಚುಕ್ಕಿ ರೋಗ: ಕೇಂದ್ರದಿಂದ ತಜ್ಞರ ಸಮಿತಿ ರಚನೆ, ಮುಂದೇನು?

KJ Staff
KJ Staff
Areca palm

Areca palm: ರಾಜ್ಯದ ಅಡಿಕೆ ತೋಟಗಳಲ್ಲಿ ಕಾಣಿಸಿಕೊಂಡ ಹಾಗೂ ಹಬ್ಬಿರುವ ಎಲೆ ಚುಕ್ಕಿ ರೋಗದ ಬಗ್ಗೆ ಸಮಗ್ರ ಅಧ್ಯಯನ ಮಾಡುವುದಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.

ಇದನ್ನೂ ಓದಿರಿ: ವಾಟ್ಸ್ ಆ್ಯಪ್ ಸ್ಥಗಿತ; ವಾಟ್ಯಾಪ್‌ಗೂ ಗ್ರಹಣ ಎಂದ ಜನ! 

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಅಡಿಕೆ ತೋಟದಲ್ಲಿ ಎಲೆ ಚುಕ್ಕಿರೋಗ ಕಾಣಿಸಿಕೊಂಡಿತ್ತು. ಇದರಿಂದ ಅಡಿಕೆ ಬೆಳೆಯನ್ನು ಬೆಳೆದ ಸಾವಿರಾರು ರೈತರು ಸಂಕಷ್ಟಕ್ಕೆ ಸಿಲುಕಿದ್ದರು. 

ಇದೀಗ ಕೇಂದ್ರ ಸರ್ಕಾರವು ಅಡಿಕೆಯಲ್ಲಿ ಕಂಡು ಬಂದಿರುವ ಎಲೆಚುಕ್ಕಿ ರೋಗದ ಬಗ್ಗೆ ಅಧ್ಯಯನ ಮಾಡಲು ಏಳು ತಜ್ಞರನ್ನು ಒಳಗೊಂಡ ಸಮಿತಿಯನ್ನು ಕೇಂದ್ರ ಕೃಷಿ ಸಚಿವಾಲಯ ರಚಿಸಿದೆ.

ಇದನ್ನೂ ಓದಿರಿ: ಚಿನ್ನ, ಬೆಳ್ಳಿ ದರ ಯಥಾಸ್ಥಿತಿ, ಎಷ್ಟಿದೆ ಚಿನ್ನ, ಬೆಳ್ಳಿ ದರ ?

ಕೇಂದ್ರ ಸರ್ಕಾರ ರಚಿಸಿರುವ ಈ ಸಮಿತಿಯಲ್ಲಿ ಕಾಸರಗೋಡಿನ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯ (ಸಿಪಿಸಿಆರ್‌ಐ) ಭಾರತೀಯ ಕೃಷಿ ವಿಜ್ಞಾನ ಪರಿಷತ್‌ನ ನಿರ್ದೇಶಕಿ ಅನಿತಾ ಕರುಣ್‌, ಕಲ್ಲಿಕೋಟೆಯ ಅಡಿಕೆ ಮತ್ತು ಮಸಾಲೆ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಹನಿ ಚೆರಿಯನ್,

ನಿರ್ದೇಶನಾಲಯದ ಉಪ ನಿರ್ದೇಶಕ ಫೆಮಿನಾ, ಸಿಪಿಸಿಆರ್‌ಐ ಬೆಳೆ ಉತ್ಪಾದನಾ ವಿಭಾಗದ ಮುಖ್ಯಸ್ಥ ರವಿ ಭಟ್‌, ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಎಂ.ವಾಲಿ, ತೋಟಗಾರಿಕೆ ಇಲಾಖೆಯ ದಕ್ಷಿಣ ಕನ್ನಡದ ಉಪನಿರ್ದೇಶಕ ಎಚ್‌.ಆರ್‌.ನಾಯ್ಕ್, ಸಿಪಿಸಿಆರ್‌ಐನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ವಿನಾಯಕ ಹೆಗಡೆ ಇದ್ದಾರೆ.

ಸಮಿತಿಯು ಸಭೆಗಳನ್ನು ನಡೆಸಬಹುದು ಹಾಗೂ ಅಡಿಕೆಯ ಎಲೆ ಚುಕ್ಕಿ ರೋಗದ ಸಮಸ್ಯೆ ಬಗೆಹರಿಸಲು ಕಾರ್ಯತಂತ್ರಗಳನ್ನು ರೂಪಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈಚೆಗೆ ಕೇಂದ್ರ ಕೃಷಿ ಸಚಿವಾಲಯದ ಅಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸಭೆ ನಡೆಸಿದ್ದರು. 

ರಾಜ್ಯದಲ್ಲಿ ನೈರುತ್ಯ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ! 

ಕರ್ನಾಟಕದಲ್ಲಿ ಎಲೆಚುಕ್ಕಿ ರೋಗದಿಂದಾಗಿ 20 ಸಾವಿರ ಹೆಕ್ಟೇರ್‌ನಷ್ಟು ಅಡಿಕೆ ತೋಟಕ್ಕೆ ಹಾನಿಯಾಗಿದೆ.

ಈ ರೋಗದ ಬಗ್ಗೆ ಅಧ್ಯಯನಕ್ಕೆ ವಿಜ್ಞಾನಿಗಳ ತಂಡ ಕಳುಹಿಸಿಕೊಡಬೇಕು ಎಂದು ಕರ್ನಾಟಕದ ಅಡಿಕೆ ಬೆಳೆಗಾರರ ನಿಯೋಗವು ಕೇಂದ್ರ ಸರ್ಕಾರಕ್ಕೆ ಕಳೆದ ಬುಧವಾರ ಮನವಿ ಸಲ್ಲಿಸಿತ್ತು.

ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ನಿಯೋಗವು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು.

ದೇಶದಲ್ಲಿ 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ  (Areca palm) ಅಡಿಕೆ ಬೆಳೆಯಲಾಗುತ್ತಿದ್ದು, ವಾರ್ಷಿಕ ವಹಿವಾಟು ₹5,400 ಕೋಟಿ ಆಗಿದೆ. 

ಕರ್ನಾಟಕದಲ್ಲಿ ₹4,300 ಕೋಟಿ ಮೌಲ್ಯದ 9.5 ಲಕ್ಷ ಟನ್‌ ಅಡಿಕೆ ಬೆಳೆಯಲಾಗುತ್ತಿದೆ. ಅಡಿಕೆ ಬೆಳೆಯು 50 ಲಕ್ಷ ಜನರಿಗೆ ಜೀವನೋಪಾಯವನ್ನು ಒದಗಿಸುತ್ತಿದೆ.

ಕಳೆದ ಕೆಲವು ವರ್ಷಗಳಿಂದ ಅಡಿಕೆಗೆ ಉತ್ತಮ ಬೆಲೆ ದೊರಕುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡಿರುವ ಈ ರೋಗದಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಲಾಗಿತ್ತು. 

Areca palm

ಸಮಿತಿ ರಚನೆಗೆ ಸ್ವಾಗತ

Areca palm ರಾಜ್ಯದ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಏಳು ತಜ್ಞರನ್ನು ಒಳಗೊಂಡ ಸಮಿತಿ ರಚನೆ ನಿರ್ಧಾರವನ್ನು ಗೃಹ ಸಚಿವ ಹಾಗೂ ಅಡಿಕೆ ಟಾಸ್ಕ್‌ ಫೋರ್ಸ್ ಅಧ್ಯಕ್ಷ ಅರಗ ಜ್ಞಾನೇಂದ್ರ ಸ್ವಾಗತಿಸಿದ್ದಾರೆ.

 ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿ ಎಂದಿದ್ದಾರೆ.  

Published On: 25 October 2022, 04:11 PM English Summary: Leaf spot disease Areca palm in : formation of expert committee by the center, what next?

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.