1. ಸುದ್ದಿಗಳು

ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ಮೇಳ

ಗದಗ ಜಿಲ್ಲೆಯ ನರೇಗಲ್ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ಆತ್ಮ ನಿರ್ಭರ ಯೋಜನೆಯ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಪಟ್ಟಣ ಪಂಚಾಯ್ತಿ ಆವರಣದಲ್ಲಿ ಡಿಸೆಂಬರ್ 9 ರಂದು  ಕಿರು ಸಾಲ ಮೇಳ ಆಯೋಜನೆ ಮಾಡಲಾಗಿದೆ’ ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮಹೇಶ ಬಿ. ನಿಡಶೇಶಿ ತಿಳಿಸಿದ್ದಾರೆ.

ಬೀದಿ ಬದಿ ವ್ಯಾಪಾರಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ್ದು, ಅವರಿಗೆಲ್ಲಾ ಸಾಲ ಮೇಳ ನಡೆಯುವ ಸಂದರ್ಭದಲ್ಲಿ ಬ್ಯಾಂಕ್ ವ್ಯವಸ್ಥಾಪಕರು ಸ್ಥಳದಲ್ಲಿಯೇ ಸಾಲ ಮಂಜೂರು ಮಾಡುತ್ತಾರೆ. ಆದ್ದರಿಂದ ಬೀದಿ ಬದಿ ವ್ಯಾಪಾರಸ್ಥರು ತಪ್ಪದೇ ಮೇಳದಲ್ಲಿ ಪಾಲ್ಗೊಳ್ಳಬೇಕು’ ಎಂದು ಹೇಳಿದರು.

ಬೀದಿ ವ್ಯಾಪಾರಿಗಳಿಗೆ ಸಾಲ

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯ ವಿಶೇಷ ಕಿರು ಸಾಲ ಸೌಲಭ್ಯ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಬೀದಿಬದಿ ವ್ಯಾಪಾರಿಗಳಿಗೆ ಮಂಜೂರಾಗಿರುವ 10 ಸಾವಿರ ಸಾಲ ಯೋಜನೆ ಸೌಲಭ್ಯ ಜನವರಿ ತಿಂಗಳ ಒಳಗೆ ಬಿಡುಗಡೆಗೊಳಿಸಿ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಹೇಳಿದರು.

ಅವರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಹಾಗೂ ನಗರ ಪ್ರದೇಶದಲ್ಲಿನ ಎಲ್ಲಾ ಬ್ಯಾಂಕುಗಳ ವ್ಯವಸ್ಥಾಪಕರುಗಳ ಮತ್ತು ಡೇ ನಲ್ಮ್ ಶಾಖೆಯ ಸಮುದಾಯ ಸಂಘನಾಧಿಕಾರಿ, ಸಮುದಾಯ ಸಂಘಟಕರು ಮತ್ತು ವಿಷಯ ನಿರ್ವಾಹಕರು ಹಾಗೂ ಎಲ್ಲಾ ನೋಡಲ್ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೇಂದ್ರದ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯ ವಿಶೇಷ ಕಿರು ಸಾಲ ಸೌಲಭ್ಯ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಬ್ಯಾಂಕ್‌ ಅಧಿಕಾರಿಗಳ ಸಹಕಾರ ಅತ್ಯಗತ್ಯ ಎಂದರು.

ಕೊರೊನಾ ಸೋಂಕು, ಲಾಕ್‍ಡೌನ್ ಪರಿಣಾಮದಿಂದಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಬೀದಿ ಬದಿ ವ್ಯಾಪಾರಿಗಳಿಗಾಗಿಯೇ ಕೇಂದ್ರ ಸರ್ಕಾರ ಕಿರು ಸಾಲ ಯೋಜನೆಯನ್ನು ಜಾರಿಗೊಳಿಸಿದೆ. ಸಾಲಕ್ಕಾಗಿ ಅರ್ಜಿ ಸಲ್ಲಿಸಿದ ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲಸೌಲಭ್ಯ ಒದಗಿಸಿ ಎಂದರು.

Published On: 08 December 2020, 09:23 AM English Summary: loan fair for street vendors

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.