1. ಸುದ್ದಿಗಳು

ಪೋಷಕರೇ ಗಮನಿಸಿ: ವಿದ್ಯಾಭ್ಯಾಸಕ್ಕೆ 4 ಲಕ್ಷದ ವರೆಗೆ ಸಾಲ..ಯಾರೆಲ್ಲಾ ಅರ್ಹರು?

Maltesh
Maltesh
Loan up to 4 Lakhs for Education..Who is Eligible?

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್, ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ಕೊರ್ಸಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದ್ದು, ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್  kmdconline.karnataka.gov.in ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ಬಳಿಕ ವಿಧ್ಯಾರ್ಥಿಗಳಿಂದ ಮೂಲ ಇನ್‌ಡೆಂನಿಟಿ ಬಾಂಡ್ ನ್ನು ನಿಗಮದ ಜಿಲ್ಲಾ ಕಚೇರಿಗೆ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಪ್ಪಳ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08539-225008ಗೆ ಸಂಪರ್ಕಿಸಬಹುದು ಎಂದು ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Free Smartphones : ಮಹಿಳೆಯರಿಗೆ ಸ್ಮಾರ್ಟ್‌ ಫೋನ್‌ ಖರೀದಿಗೆ ಹಣ

ಸಮಾಜ ಕಲ್ಯಾಣ ಇಲಾಖೆ: ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2023ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನೀಯರಿಂಗ್ ಹಾಗೂ ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 31ರ ವರೆಗೆ ಅವಕಾಶವಿದ್ದು, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವೆಬ್‌ಸೈಟ್  www.sw.kar.nic.in ನಲ್ಲಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವೆಬ್‌ಸೈಟ್  www.tw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಮ್ಯಾನುವಲ್‌ನ ಯಾವುದೇ ಅರ್ಜಿ ಅಥವಾ ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ. 

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಗಂಗಾವತಿ ಹಾಗೂ ಕುಷ್ಟಗಿ, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

@ಡಿಐಪಿಆರ್‌ ಕೊಪ್ಪಳ

Published On: 17 June 2023, 11:14 AM English Summary: Loan up to 4 Lakhs for Education..Who is Eligible?

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.