ಆಧಾರ್ ಕಾರ್ಡ್ನೊಂದಿಗೆ ಪಾನ್ಕಾರ್ಡ್ ಜೋಡಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಲವು ಆದೇಶಗಳು ಬರುತ್ತಲ್ಲೇ ಇವೆ.
ಮಾಂಡೌಸ್ ಚಂಡಮಾರುತ ಪ್ರಭಾವ: ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!
ಇದೀಗ ಸಾರ್ವಜನಿಕರಿಗೆ ಮತ್ತೊಮ್ಮೆ ಗಡುವು ವಿಸ್ತರಿಸಲಾಗಿದೆ. 2023ರ ಮಾರ್ಚ್ 31ರ ಒಳಗೆ ಆಧಾರ್ ಕಾರ್ಡ್ನೊಂದಿಗೆ ಪಾನ್ಕಾರ್ಡ್ನೊಂದಿಗೆ ಲಿಂಕ್ ಮಾಡಿಕೊಳ್ಳಬೇಕು ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಒಂದೊಮ್ಮೆ ಈ ಅವಧಿಯ ಒಳಗಾಗಿ ಪಾನ್ ಕಾರ್ಡ್ ಲಿಂಕ್ ಆಗದೆ ಇದ್ದರೆ, ನಿಷ್ಕ್ರಿಯವಾಗಲಿದೆ ಎಂದು ಸೂಚನೆ ನೀಡಲಾಗಿದೆ.
ಅದಾಯ ತೆರಿಗೆ ಇಲಾಖೆ ಕಾಯ್ದೆ 1961ರ ಅನ್ವಯ ಆಧಾರ್ ಜೊತೆಗೆ ಪಾನ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಎಂದು ಈಗಾಗಲೇ ಹೇಳಲಾಗಿದೆ. ಆದರೆ, ಇಲ್ಲಿಯವರೆಗೆ ಹಲವರು ಆಧಾರ್ ಕಾರ್ಡ್ನೊಂದಿಗೆ ಪಾನ್ ಕಾರ್ಡ್ ಲಿಂಕ್ ಮಾಡಿಕೊಂಡಿಲ್ಲ.
ಇದೀಗ ಮತ್ತೊಮ್ಮೆ ಅವಕಾಶ ನೀಡಲಾಗಿದ್ದು, ಈ ಬಾರಿ ಖಡಕ್ ಎಚ್ಚರಿಕೆಯನ್ನು ನೀಡಲಾಗಿದೆ. 2023ರ ಮಾರ್ಚ್ 31ರ ಒಳಗಾಗಿ ಆಧಾರ್ ಮತ್ತು ಪಾನ್ ಲಿಂಕ್ ಮಾಡಿಕೊಳ್ಳದಿದ್ದರೆ, ಅವಧಿ ಮುಗಿದ ಬಳಿಕ ಏಪ್ರಿಲ್ 1ರಿಂದ ಪಾನ್ ಕಾರ್ಡ್ ನಿಷ್ಕ್ರೀಯಗೊಳ್ಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಈಗಾಗಲೇ ಹಲವು ಬಾರಿ ಗಡುವು ನೀಡಿದ್ದ ಆದಾಯ ತೆರಿಗೆ ಇಲಾಖೆ ಇದೀಗ ಒಂದು ಸಾವಿರ ಪಾವತಿಸಿ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಗ್ ಮಾಡಲು ಅವಕಾಶ ನೀಡಿದೆ.
ಸರ್ಕಾರದ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳದಿದ್ದರೆ, ಪಾನ್ ಕಾರ್ಡ್ ನಿಷ್ಕ್ರೀಯಗೊಳಿಸಲು ಇಲಾಖೆ ತೀರ್ಮಾನಿಸಿದೆ. ಪಾನ್ ಕಾರ್ಡ್ ನಿಷ್ಕ್ರೀಯಗೊಂಡರೆ ಬ್ಯಾಂಕ್ ಜೊತೆಗೆ ವಹಿವಾಟು ನಡೆಸುವುದು ಸೇರಿದಂತೆ ಎಲ್ಲ ಹಣಕಾಸು ವಹಿವಾಟಿಗೆ ಸಮಸ್ಯೆ ಆಗಲಿದೆ.
ಆಧಾರ್ ಜೊತೆಗೆ ಪಾನ್ ಲಿಂಕ್ ಮಾಡಿಕೊಳ್ಳಲು ಆದಾಯ ತೆರಿಗೆ ಇಲಾಖೆ ಅಧಿಕೃತ ಜಾಲತಾಣ(ಇ-ಪೋರ್ಟಲ್) www.eportal.incometax.gov.in ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ನಿಮ್ಮ ಆಧಾರ್ ಕಾರ್ಡ್ ಹಾಗೂ ಪಾನ್ ನಂಬರ್ ನಮೂದಿಸಿ ಅಲ್ಲಿನ ಪ್ರಕ್ರಿಯೆ ಪೂರ್ಣಗೊಳಿಸಿ ಲಿಂಕ್ ಮಾಡಿಕೊಳ್ಳಬಹುದಾಗಿದೆ.
Share your comments