1. ಸುದ್ದಿಗಳು

ರಾಷ್ಟ್ರೀಯ ಯುವಜನೋತ್ಸವ: ಯುವ ಕಲರವಕ್ಕೆ ಸಂಭ್ರಮದ ತೆರೆ

Maltesh
Maltesh

ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡೆ ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಶ್ರೀ. ಅನುರಾಗ್ ಸಿಂಗ್ ಠಾಕೂರ್ ಅವರಿಂದು ಕರ್ನಾಟಕದ ಧಾರವಾಡದಲ್ಲಿ ನಡೆದ 26 ನೇ ರಾಷ್ಟ್ರೀಯ ಯುವ ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಐದು ದಿನಗಳ ಈ ಕಾರ್ಯಕ್ರಮವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರುವಾರ ಉದ್ಘಾಟಿಸಿದ್ದರು. 

ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡೆ ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಶ್ರೀ. ಅನುರಾಗ್ ಸಿಂಗ್ ಠಾಕೂರ್ ಅವರು ಜಿ -20 ನಾಯಕರಿಗೆ ವಿವಿಧ ಪ್ರಮುಖ ವಿಷಯಗಳ ಬಗ್ಗೆ ಪರಿಹಾರಗಳನ್ನು ಸೂಚಿಸುವ ದಾಖಲೆಗಳನ್ನು ತಯಾರಿಸಲು ವೈ -20 ಮಾತುಕತೆ ಮತ್ತು ವೈ -20 ನಡಿಗೆಯಲ್ಲಿ ಸೇರುವಂತೆ ಯುವಕರನ್ನು ಆಹ್ವಾನಿಸಿದರು.

Weather report : ಜನವರಿ 18 ರಿಂದ ಈ ನಗರಗಳಲ್ಲಿ ಹೆಚ್ಚಲಿದೆ ಚಳಿ

ಯುವ ಉತ್ಸವವು ಏಕತೆ ಮತ್ತು ಸಮಗ್ರತೆಯನ್ನು ಸಂಕೇತಿಸುತ್ತದೆ ಏಕೆಂದರೆ ಇದು ಅಕ್ಷರಶಃ ಭಾರತದ ಕಿರು ಚಿತ್ರಣವನ್ನು ರೂಪಿಸುತ್ತದೆ ಎಂದು ಶ್ರೀ ಅನುರಾಗ್ ಸಿಂಗ್ ಠಾಕೂರ್ ಅವರು ಹೇಳಿದರು. ಯುವ ಪ್ರತಿನಿಧಿಗಳು ಯುವ ಉತ್ಸವದಿಂದ ತಾವು ತೆಗೆದುಕೊಂಡು ಹೋಗುವ ಸಂದೇಶಗಳನ್ನು ಇತರರೊಂದಿಗೆ ಹಂಚಿಕೊಳ್ಳುವಂತೆ ಸಚಿವರು ತಿಳಿಸಿದರು.

ದೇಶವು ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಅಭೂತಪೂರ್ವ ವೃದ್ಧಿ ಮತ್ತು ಪ್ರಗತಿಯನ್ನು ಸಾಧಿಸಿದೆ ಎಂದು ಅವರು ಉಲ್ಲೇಖಿಸಿದರು. 2019-20ನೇ ಸಾಲಿನ ರಾಷ್ಟ್ರೀಯ ಯುವ ಪ್ರಶಸ್ತಿಗಳನ್ನು ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಮತ್ತು ಕೊಡುಗೆ ನೀಡಿದ 19 ವ್ಯಕ್ತಿಗಳು ಮತ್ತು ಆರು ಸಂಸ್ಥೆಗಳಿಗೆ ಈ ಸಂದರ್ಭದಲ್ಲಿ ಪ್ರದಾನ ಮಾಡಲಾಯಿತು.

ಕರ್ನಾಟಕದ ರಾಜ್ಯಪಾಲ ಶ್ರೀ ತಾವರ್ ಚಂದ್ ಗೆಹ್ಲೋಟ್, ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಪ್ರಲ್ಹಾದ್ ಜೋಶಿ, ಚುನಾಯಿತ ಪ್ರತಿನಿಧಿಗಳು ಹಾಗೂ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿರಿ:ಕೃಷಿ ಯಂತ್ರೋಪಕರಣಗಳನ್ನು ಖರೀದಿಸುವ ಮುನ್ನ ಪರಿಗಣಿಸಬೇಕಾದ ಪ್ರಮುಖ ಅಂಶಗಳು

ಸ್ವಚ್ಛ, ಸುಂದರ, ಸಶಕ್ತ ರಾಷ್ಟ್ರವನ್ನು ನಿರ್ಮಿಸುವ ಸರ್ಕಾರದ ಉಪಕ್ರಮಗಳಲ್ಲಿ ಸಕ್ರಿಯವಾಗಿ ಸೇರುವಂತೆ ಸಚಿವರು ಯುವ ಪೀಳಿಗೆಯನ್ನು ಆಗ್ರಹಿಸಿದರು. ನರೇಂದ್ರ ಮೋದಿ ಸರ್ಕಾರ ಪ್ರಾರಂಭಿಸಿದ ವಿವಿಧ ಯುವ ಕಲ್ಯಾಣ ಕ್ರಮಗಳ ಬಗ್ಗೆ ವಿವರಿಸಿದ ಶ್ರೀ ಅನುರಾಗ್ ಸಿಂಗ್ ಠಾಕೂರ್, ಈ ಕ್ರಮಗಳನ್ನು ರಾಷ್ಟ್ರ ನಿರ್ಮಾಣದಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಹುಬ್ಬಳ್ಳಿ-ಧಾರವಾಡದಲ್ಲಿ ಹಸಿರು ಉತ್ಸವ ಎಂದು ಆಚರಿಸಲಾದ ರಾಷ್ಟ್ರೀಯ ಯುವ ಉತ್ಸವವನ್ನು ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ಅವರು ಸಂತಸ ವ್ಯಕ್ತಪಡಿಸಿದರು. ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ಜೀವನದಲ್ಲಿ ತ್ಯಾಜ್ಯ ಕಡಿತ ಉಪಕ್ರಮಗಳ ಅಗತ್ಯವನ್ನು ಸಚಿವರು ಪ್ರತಿಪಾದಿಸಿದರು. ಈ ನಿಟ್ಟಿನಲ್ಲಿ ಪ್ರತಿಜ್ಞೆ ಮಾಡುವಂತೆ ಅವರು ಯುವಕರಿಗೆ ಕರೆ ನೀಡಿದರು.

Published On: 17 January 2023, 10:49 AM English Summary: national youth festival closing ceremony

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.