1. ಸುದ್ದಿಗಳು

100 ರೂಪಾಯಿಗೆ ಒಂದು ಟನ್ ಮರಳು ನೀಡಲು ಮರಳು ನೀತಿ ಜಾರಿಗೆ ತರಲಾಗುತ್ತಿದೆ- ನಿರಾಣಿ

sand

ಇದೇ ತಿಂಗಳು ಅಂತ್ಯಕ್ಕೆ ಹೊಸ ಮರಳು ನೀತಿ  ಜಾರಿಗೆ ತರಲಾಗುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ. ಅವರು  ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲೆಯ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಮರಳು ಪೂರೈಸುವ ನಿಟ್ಟಿನಲ್ಲಿ ಈ ಹೊಸ ನೀತಿಯನ್ನು ಜಾರಿಗೆ ತರಲಾಗುವುದು.  ಹೊಸ ನೀತಿಯನ್ವಯ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಮನೆಗಳಿಗೆ ಪ್ರತಿ ಟನ್ ಗೆ 100 ರೂಪಾಯಿ ದರದಲ್ಲಿ ಮರಳು ಪೂರೈಸಲಾಗುವುದು ಎಂದರು.

 ಸಾರ್ವಜನಿಕರ ಉಪಯೋಗದ ಕುಡಿಯುವ ನೀರಿನ ಸಂಬಂಧಿಸಿದ ಸ್ಥಳಗಳಲ್ಲಿ ಹಳ್ಳ, ಕೆರೆ ಹಾಗೂ ಆಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಮರಳು ತೆಗೆಯದಂತೆ ನಿರ್ಬಂಧ ಹೇರಲಾಗುತ್ತಿದೆ. ಮರಳು ದರವನ್ನು ಪ್ರತಿದಿನ ಬಂಗಾರ, ಬೆಳ್ಳಿ ದರ ಪ್ರಕಟಗೊಂಡಂತೆ ಪ್ರತಿ ವಾರಕ್ಕೊಮ್ಮೆ ಮರಳಿನ ದರ ಪಟ್ಟಿ ನೀಡಲಾಗುವುದು. ಇದರಿಂದ ಸರ್ಕಾರಕ್ಕೆ ಆದಾಯ ಹೆಚ್ಚುವುದರ ಜೊತೆಗೆ ಸಾರ್ವಜನಿಕರಿಗೆ ಮುಕ್ತವಾಗಿ ಮರಳು ದೊರೆಯಲಿದೆ ಎಂದು ತಿಳಿಸಿದರು.

ಗಣಿಗಾರಿಕೆಯಲ್ಲಿ ಸ್ಟೋಟಗೊಂಡು ಆಗುವ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಕಾರ್ಮಿಕರಿಗೆ ಸೂಕ್ತ ತರಬೇತಿ ನೀಡುವ ಸ್ಕೂಲ್ ಆಫ್ ಮೈನಿಂಗ್ ಕೇಂದ್ರವನ್ನು ಬಳ್ಳಾರಿ ಜಿಲ್ಲೆಯ ಸಂಡೂರು ಮತ್ತು ಚಿತ್ರದುರ್ಗದಲ್ಲಿ ನಿರ್ಮಿಸಲಾಗುತ್ತಿದೆ. ಈಗಾಗಲೇ 50 ಎಕರೆ ಜಮೀನು ಖರೀದಿಸಲಾಗಿದೆ. ಶೀಘ್ರವೇ ಭೂಮಿ ಪೂಜೆ ನೆರವೇರಿಸಲಾಗುವುದು. ಗಣಿಗಾರಿಕೆಯಲ್ಲಿ ಅಕ್ರಮ ತಡೆಗೆ ಪೊಲೀಸ್ ಮತ್ತು ಅರಣ್ಯ ಇಲಾಖೆ ನೌಕರರಿಗೂ ಸಮವಸ್ತ್ರ ವಾಕಿಟಾಕಿ ಪೂರೈಸಲಾಗುತ್ತಿದೆ. ನಿವೃತ್ತ ಯೋಧರನ್ನು ಈ ಕಾರ್ಯಕ್ಕೆ ನೇಮಿಸಲಾಗುತ್ತಿದೆ ಎಂದರು.

ಆಯಾ ಭಾಗದ ಗ್ರಾಪಂ, ನಗರಸಭೆಯ ಕಟ್ಟಡ ಅನುಮತಿಯಲ್ಲಿ ತೋರಿಸಿದಂತೆ ನಿಗದಿತ ಮರಳು ಪೂರೈಸಲಾಗುವುದು.ಸರ್ಕಾರದಿಂದ  ಟೆಂಡರ್ ಕರೆಯಲಾದ ಕಾಮಗಾರಿಗಳಿಗೆ ಮರಳು ಸಂಗ್ರಹ ಹೊರತುಪಡಿಸಿ ಗುತ್ತಿಗೆದಾರ ಕಾರ್ಯ ನಿರ್ವಹಿಸಿದಂತೆ ಹಂತ ಹಂತವಾಗಿ ಪೂರೈಸಲಾಗುವುದು ಎಂದರು.

Published On: 08 April 2021, 04:53 PM English Summary: New sand policy implemented

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.