ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಈ ಕೆಳಕಂಡ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್/ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬ್ಯಾಂಕ್ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಕಿರುಸಾಲ/ಸ್ವಸಹಾಯ ಗುಂಪುಗಳಿಗೆ ಸಹಾಯಧನ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ಕೌಶಲ್ಯಾಭಿವೃದ್ಧಿ/ಉದ್ಯಮಶೀಲತಾ ತರಬೇತಿ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಪ್ರವರ್ಗ-1ರ ಕೋಲಿ, ಗಂಗಾಮತ, ಬೆಸ್ತ, ಕಬ್ಬಲಿಗ, ಮೊಗವೀರ, ಅಂಬಿಗ/ಅಂಬಿ, (ಬಾರ್ಕಿ/ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆ-ಬೆಸ್ತ/ಗುಂಡೆಬೆಸ್ತ, ಹರಕಂತ್ರ, ಜಲಗಾರ, ಕಬ್ಬೇರ/ಕಬ್ಬೇರ್, ಕಬ್ಬಿಲಿ, ಕಹರ್, ಖಾರ್ವಿ/ಕೊಂಕಣಖಾರ್ವಿ, ಕೋಳಿಮಹದೇವ್, ಮಡ್ಡರ್, ಮೀನಗಾರ್, ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ, ತೊರೆಯ ಹಾಗೂ ವಾಗಿ ಜಾತಿಗೆ ಸೇರಿದವರಾಗಿರಬೇಕು. ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು.
ಆನ್ಲೈನ್ ಮೂಲಕ ಅರ್ಜಿಸಲ್ಲಿಸಬಯಸುವ ಅಭ್ಯರ್ಥಿಗಳು ನಿಗಮದ https://ambigaradevelopment.karnataka.gov.in/ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ 2020ರ ಆಗಸ್ಟ್ 12 ರೊಳಗಾಗಿ ಸಲ್ಲಿಸಬೇಕು. ನಂತರ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಪ್ರತಿ ಹಾಗೂ ದಾಖಲಾತಿಗಳ ಒಂದು ಪ್ರತಿಯನ್ನು ಕಲಬುರಗಿ ಜಿಲ್ಲಾ ನಿಗಮದ ಕಚೇರಿಯಲ್ಲಿ ಸಲ್ಲಿಸಬೇಕು.
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗಮದ ವೆಬ್ಸೈಟ್ದಿಂದ ಅಥವಾ ಜಿಲ್ಲಾ ನಿಗಮದ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2020ರ ಆಗಸ್ಟ್ 12 ರ ಸಂಜೆ 4.30 ಗಂಟೆಯೊಳಗಾಗಿ ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನಿಗಮದ ಕಚೇರಿಯನ್ನು ಅಥವಾ ನಿಗಮದ ವೆಬ್ಸೈಟ್ನ್ನು ಸಂಪರ್ಕಿಸಲು ಕೋರಲಾಗಿದೆ.
Share your comments