ಭಾರತ ಸ್ವಂತ ಶಕ್ತಿ ಹೊಂದಿದೆ, ಇಡೀ ವಿಶ್ವಕ್ಕೇ ಕೊಡುಗೆ ನೀಡಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬುಧವಾರ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ಸೋಂಕು ತಡೆಯುವ ಸಂಬಂಧ ಲಾಕ್ ಡೌನ್ ಜಾರಿಯಲ್ಲಿದ್ದ ಪರಿಣಾಮ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಆರ್ಥಿಕ ಚೇತರಿಕಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದಾರೆ ಎಂದರು.
ಸಣ್ಣ ಕೈಗಾರಿಕೆಗಳಿಗೆ ಬಂಪರ್ ಗಿಫ್ಟ್
25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ಹಾಗೂ 18 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ವಾಪಸ್ ನೀಡಲಾಗುವುದು.
ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ನೀಡುತ್ತಿದ್ದು, ಇದರಿಂದ 45 ಲಕ್ಷ ಸಣ್ಣ ಕಂಪನಿಗಳಿಗೆ ಅನುಕೂಲವಾಗಲಿದೆ ಎಂದರು.
ಅಕ್ಟೋಬರ್ 31ರ ವರೆಗೆ ಸಣ್ಣ ಕೈಗಾರಿಕೆಗಳು ಸಾಲ ಪಡೆಯಲು ಅವಕಾಶ ನೀಡಲಾಗಿದೆ. ಈ ಕಂಪನಿಗಳು ಪಡೆಯುವ ಸಾಲಕ್ಕೆ ಸರ್ಕಾರವೇ ಗ್ಯಾರಂಟಿ ನೀಡಲಿದೆ. ಸಾಲ ಮರುಪಾವತಿಗೆ ನಾಲ್ಕು ವರ್ಷ ಕಾಲಾವಕಾಶ ನೀಡಲಾಗಿದ್ದು, ಒಂದು ವರ್ಷದವರಗೆ ಇಎಂಐ ವಿನಾಯಿತಿ ನೀಡಲಾಗುವುದು ಎಂದರು
ಆದಾಯ ತೆರಿಗೆದಾರರಿಗೆ ಬಂಪರ್ ಗಿಫ್ಟ್:
ಆದಾಯ ತೆರಿಗೆದಾರರಿಗೆ ಕೇಂದ್ರ ಸರಕಾರ ಬಂಪರ್ ಗಿಫ್ಟ್ ನೀಡಿದೆ. 18 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ಆದಾಯ ತೆರಿಗೆ ಇಲಾಖೆ ವಾಪಸ್ ನೀಡಿದೆ. ಇದರಿಂದ 14 ಕೋಟಿ ಆದಾಯ ತೆರಿಗೆದಾರರಿಗೆ ಅನುಕೂಲವಾದಂತಾಗಿದೆ.
ಸಣ್ಣ ಕೈಗಾರಿಕೆಗಳಿಗೆ ಅಡಮಾನ ಇಲ್ಲದೆ ಸಾಲ!
ಸಣ್ಣ ಕೈಗಾರಿಕೆಗಳಿಗೆ 3ಲಕ್ಷ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಇದರಿಂದ 45 ಲಕ್ಷ ಕೈಗಾರಿಕೆಗಳಿಗೆ ಅನುಕೂಲವಾಗಲಿದೆ. ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಅಡಮಾನವಿಲ್ಲದೆ ಸಾಲ ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ. 25 ರಿಂದ 100 ಕೋಟಿ ರೂಪಾಯಿ ವಹಿವಾಟು ಹೊಂದಿರುವ ಕೈಗಾರಿಕೆಗಳಿಗೆ ಅನುಕೂಲವಾಗಲಿದೆ.
ಸಾಲ ಮರುಪಾವತಿಗೆ ನಾಲ್ಕು ವರ್ಷಗಳವರೆಗೆ ಕಾಲಾವಕಾಶ ನೀಡಲಾಗಿದೆ. ಸಾಲ ನೀಡಿದ ಮೊದಲ 12 ತಿಂಗಳವರೆಗೆ ಸಾಲ ಮರುಪಾವತಿಸುವ ಅಗತ್ಯವಿಲ್ಲ. ಬ್ಯಾಂಕುಗಳು ನೀಡುವ ಸಾಲಕ್ಕೆ ಕೇಂದ್ರ ಸರಕಾರವೇ ಗ್ಯಾರಂಟಿ ನೀಡಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸಣ್ಣ ಕೈಗಾರಿಕೆಗಳು ಉದ್ಯೋಗಿಗಳಿಗೆ ಸಂಬಳ ನೀಡಲು ಹಣ ಇಲ್ಲದಿದ್ದರೆ, ಕೇಂದ್ರ ನೆರವು ನೀಡುತ್ತದೆ. ಮೂರು ತಿಂಗಳವರೆಗೆ ಎಟಿಎಂ ಗಳಲ್ಲಿ ಹಣ ಪಡೆಯಲು ಯಾವುದೇ ಶುಲ್ಕ ಇಲ್ಲ. ಅಕ್ಟೋಬರ್ 31ರವರೆಗೆ ಕೈಗಾರಿಕೆಗಳು ಸಾಲ ಪಡೆಯಬಹುದು. ಸಂಕಷ್ಟದಲ್ಲಿರುವ ಸಣ್ಣ ಕೈಗಾರಿಕೆಗಳಿಗೆ 20 ಸಾವಿರ ಕೋಟಿ ರೂಪಾಯಿ ಸಹಾಯಕ ಸಾಲ ನೀಡಲಾಗುವುದು.
ವಿದೇಶೀ ಕಂಪನಿಗಳಿಗೆ ಟೆಂಡರ್‌ಗೆ ಅವಕಾಶವಿಲ್ಲ:
200 ಕೋಟಿ ರೂಪಾಯಿ ವರೆಗೆ ಜಾಗತಿಕ ಟೆಂಡರ್ ಇಲ್ಲ. ವಿದೇಶಿ ಕಂಪನಿಗಳಿಗೆ ಟೆಂಡರ್‌ನಲ್ಲಿ ಅವಕಾಶ ಇಲ್ಲ. ಇನ್ನು ಮುಂದೆ ಸೇವಾ ವಲಯ ಮತ್ತು ಉತ್ಪಾದನಾ ವಲಯ ಎರಡೂ ಒಂದೇ ಆಗಲಿವೆ.
ಸಣ್ಣ ಕೈಗಾರಿಕೆಗಳಿಗೆ ಸರಕಾರ ಉಳಿಸಿಕೊಂಡಿರುವ ಬಾಕಿಯನ್ನು ವಾಪಸ್ ಕೊಡಲಿದ್ದೇವೆ. ಮುಂದಿನ 45 ದಿನಗಳಲ್ಲಿ ಬಾಕಿ ವಾಪಸ್ ನೀಡಲಾಗುವುದು. 15 ಸಾವಿರ ರೂಪಾಯಿ ಒಳಗೆ ಸಂಬಳ ತೆಗೆದುಕೊಳ್ಳುವ ಉದ್ಯೋಗಿಗಳಿಗೆ ಕೂಡಲೇ ಇಪಿಎಫ್ ಪಾವತಿ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಮಿಕರಿಗೆ ಕೂಡಲೇ ಇಪಿಎಫ್:
ವ್ಯಾಪಾರಿಗಳು, ಕಾರ್ಮಿಕರಿಗೆ ಇಪಿಎಫ್ ಮೂಲಕ 2,500 ಕೋಟಿ ರೂಪಾಯಿ ನೆರವು ನೀಡಲಿದೆ. ಸಣ್ಣ ಸಾಲ ನೀಡುವ ಬ್ಯಾಂಕೇತರ ಹಣಕಾಸು ಸಂಸ್ಥಗಳು, ಗೃಹ ಸಾಲ ನೀಡುವ ಸಂಸ್ಥೆಗಳು ಹಾಗೂ ಸಣ್ಣ ಸಾಲ ನೀಡುವ ಸಂಸ್ಥೆಗಳು ಕೇಂದ್ರ ಸರಕಾರ ನೆರವು ನೀಡಲಿದೆ. ಈ ವಲಯಕ್ಕೆ 30 ಸಾವಿ ಕೋಟಿ ರೂಪಾಯಿ ನೀಡಲಿದೆ.
ವಿದ್ಯುತ್ ಸರಬರಾಜು ಕಂಪನಿಗಳಿಗೆ 90 ಸಾವಿರ ಕೋಟಿ:
ಕೊರೊನಾ ವೈರಸ್ ಲಾಕ್‌ಡೌನ್ ಪರಿಣಾಮವಾಗಿ ವಿದ್ಯುತ್ ಸರಬರಾಜು ಕಂಪನಿಗಳು ಭಾರೀ ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ವಿದ್ಯುತ್ ಸರಬರಾಜು ಕಂಪನಿಗಳಿಗೆಂದೇ 90 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಇದರಿಂದ ಈ ಕಂಪನಿಗಳು ನಷ್ಟವನ್ನು ಭರಿಸಲಿವೆ ಎಂದಿದ್ದಾರೆ.
ಸರಕಾರಿ ಗುತ್ತಿಗೆದಾರರಿಗೆ ರಿಲೀಫ್
ಸರಕಾರಿ ಗುತ್ತಿಗೆದಾರರಿಗೂ ರಿಲೀಫ್ ನೀಡಿದ್ದಾರೆ. ಬಾಕಿ ಉಳಿಸಿಕೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು 6 ತಿಂಗಳ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ. ಗುತ್ತಿಗೆದಾರರು ನೀಡಿರುವ ಬ್ಯಾಂಕ್ ಗ್ಯಾರಂಟಿಯನ್ನು ವಾಪಸ್ ನೀಡಬೇಕು. ಹಂತಹಂತವಾಗಿ ಕಾಮಗಾರಿ ಮುಗಿದ ಕೂಡಲೇ ಬ್ಯಾಂಕ್ ಗ್ಯಾರಂಟಿ ವಾಪಸ್ ನೀಡಬೇಕು ಎಂದು ಹೇಳಿದ್ದಾರೆ.
ಟಿಡಿಎಸ್/ ಟಿಸಿಎಸ್‌ಗಳಿಗೆ ಶೇ.25ರಷ್ಟು ಕಡಿತ
ಕೇಂದ್ರ ಸರಕಾರವು ಟಿಡಿಎಸ್/ ಟಿಸಿಎಸ್‌ಗಳಿಗೆ ಶೇ.25ರಷ್ಟು ಕಡಿತ ಮಾಡಿದೆ. ಇದರಿಂದ ಜನರಿಗೆ 50 ಸಾವಿರ ಕೋಟಿ ರೂಪಾಯಿ ಉಳಿತಾಯ ಆದಂತಾಗಿದೆ. ಇದು ನಾಳೆಯಿಂದಲೇ ಜಾರಿಯಾಗಿ 2021ರ ಮಾರ್ಚ್ ವರೆಗೆ ಜಾರಿಯಲ್ಲಿರುತ್ತದೆ. ಆದಾಯ ತೆರಿಗೆ ಪಾವತಿ ಮಾಡುವರಿಗೆ ಈಗಾಗಲೇ ಐಟಿ ರೀಫಂಡ್ ನೀಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಐಟಿ ರಿಟರ್ನ್ ಸಲ್ಲಿಸುವವರಿಗೆ ನವೆಂಬರ್ 30ರವರೆಗೆ ಅವಧಿ ವಿಸ್ತರಿಸಲಾಗಿದೆ.
Share your comments