ಬೇಕ್, ಟಿವಿ, ಪ್ರಿಡ್ಜ್ ಇರುವ ಬಿಪಿಎಲ್ ಕಾರ್ಡ್ ದಾರರಿಗೆ ನಾಗರಿಕ ಪೂರೈಕೆ ಸಚಿವ ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಮನೆಯಲ್ಲಿ ಟಿ.ವಿ, ಬೈಕು, ಫ್ರಿಡ್ಜ್ ಇದ್ದರೆ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಅವರು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಐದು ಎಕರೆಗಿಂತ ಹೆಚ್ಚಿನ ಜಮೀನು, ಮನೆಯಲ್ಲಿ ಬೈಕ್, ಟೀವಿ, ಫ್ರಿಡ್ಜ್ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುವುದು. ಇಂಥವಹವರು ತಮ್ಮ ಬಿಪಿಎಲ್ ಕಾರ್ಡ್ ನ್ನು ಹಿಂದಿರುಗಿಸಲು ಮಾರ್ಚ್ ಅಂತ್ಯದ ವರೆಗೆ ಗಡುವು ನೀಡಲಾಗುತ್ತದೆ ಎಂದು ಕತ್ತಿ ಹೇಳಿದ್ದಾರೆ.
ಇದೇ ವರ್ಷ ಏಪ್ರಿಲ್ ತಿಂಗಳ ನಂತರ ಸರ್ಕಾರ ಕಾರ್ಡ್ದಾರರ ಪರಿಶೀಲನೆ ನಡೆಸಲಿದ್ದು, ಒಂದು ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್ ಕಾರ್ಡ್ ಹೊಂದಿರುವುದು ಗೊತ್ತಾದರೆ ಅಂತಹವರಿಗೆ ದಂಡ ಶಿಕ್ಷೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸಚಿವರು, ಸರ್ಕಾರಿ ಅಧಿಕಾರಿಗಳು, ಅರೆ ಸರ್ಕಾರಿ ಅಧಿಕಾರಿಗಳು, 1.20 ಲಕ್ಷ ರುಪಾಯಿ ಆದಾಯ ಇರುವವರು ಬಿಪಿಎಲ್ ಕಾರ್ಡ್ ಹೊಂದಿರಲು ಸಾಧ್ಯವೇ ಇಲ್ಲ. ಅದರೂ ಕೆಲ ಅಧಿಕಾರಿಗಳು ಬಿಪಿಎಲ್ ಕಾರ್ಡ್ ಹೊಂದಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ.
ಹೀಗಾಗಿ ಅವರಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು, ಮಾರ್ಚ್ ಅಂತ್ಯದ ವರೆಗೆ ಸ್ವಯಂ ಪ್ರೇರಿತವಾಗಿ ಬಿಪಿಎಲ್ ಕಾರ್ಡ್ ಸರ್ಕಾರಕ್ಕೆ ಹಿಂದಿರುಗಿಸಲು ಸೂಚನೆ ನೀಡಲಾಗಿದೆ. ಇದಾದ ಬಳಿಕ ಖುದ್ದು ಸರ್ಕಾರವೇ ಸರ್ವೇ ನಡೆಸಿ ಇಂಥವರ ಪತ್ತೆ ಹಚ್ಚಲಿದೆ ಎಂದು ಹೇಳಿದ್ದಾರೆ.
Share your comments