ರಾಜ್ಯದಲ್ಲಿ ಮುಂಗಾರು (Monsoon) ಚುರುಕುಗೊಂಡಿದ್ದು, ಜುಲೈ 23ರಂದು ರಾಜ್ಯದಲ್ಲಿ ಮಳೆ ಪ್ರಮಾಣ ತಗ್ಗಲಿದೆ. ಅಲ್ಲಲ್ಲಿ ಚದುರಿದ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜುಲೈ 24ರಂದು ಧಾರಾಕಾರ ಮಳೆ (Heavy rain) ಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ರಾಯಚೂರು, ಹಾವೇರಿ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರದಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇರುವುದಿರಂದ ‘ಯೆಲ್ಲೊ ಅಲರ್ಟ್’ (Yellow alert) ಘೋಷಿಸಲಾಗಿದೆ.
ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 2.9 ಮೀಟರ್ಗಳಷ್ಟು ಎತ್ತರದ ಅಲೆಗಳೂ ಏಳುತ್ತಿರುವುದರಿಂದ ಮೀನುಗಾರರು(Fishers) ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.
Share your comments