ರಾಜ್ಯದಲ್ಲಿ ಒಂದೆಡೆ ಮಳೆಯ ಆರ್ಭಟ ಮುಂದುವರೆದರೆ ಇನ್ನೊಂದೆಡೆ ಮಳೆಯ (Rain) ಅಬ್ಬರ ತಗ್ಗಿದೆ. ಇದರಿಂದ ಮಳೆಯಬ್ಬರ ತಗ್ಗಿದ ಪ್ರದೇಶದಲ್ಲಿ ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ.
ಚಿತ್ರದುರ್ಗ, ವಿಜಯಪುರ, ಯಾದಗಿರಿ, ಬೆಳಗಾವಿ ಜಿಲ್ಲೆಗಳ ವಿವಿಧೆಡೆ ಮಂಗಳವಾರ ಉತ್ತಮ ಮಳೆಯಾಗಿದೆ. ಕೆಲವು ಕಡೆ ಮಳೆ ನೀರು ರೈತರ ಜಮೀನುಗಳಿಗೆ ನುಗ್ಗಿ (Heavy rainfall affected crop) ಬೆಳೆ ನಷ್ಟವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದೆ. ಉಡುಪಿ ಜಿಲ್ಲೆಯ ಹೆಜಮಾಡಿಯಲ್ಲಿ ಕಡಲ್ಕೊರೆತದಿಂದ ಒಂದು ತೆಂಗಿನ ಮರ, ತಡೆಗೋಡೆ ಸಮುದ್ರ ಪಾಲಾಗಿದ್ದು, 4 ತೆಂಗಿನ ಮರ ಹಾಗೂ 3 ವಿದ್ಯುತ್ ಕಂಬಗಳು ಅಪಾಯಕ್ಕೆ ಸಿಲುಕಿವೆ. ಪಡುಬಿದ್ರಿ, ಕಾಪು ಬೀಚ್‌ಗಳಲ್ಲೂ ಕಡಲ್ಕೊರೆತ ತೀವ್ರಗೊಂಡಿದೆ.ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರ ಗ್ರಾಮದಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಗೋಡೆ ಕುಸಿದು ಸಾವಿತ್ರಮ್ಮ ಮಡಿವಾಳ(62) ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಪಂಡರಹಳ್ಳಿ ಗ್ರಾಮದ ನಾಗಮ್ಮ (45) ಹಳ್ಳದ ನೀರಿನಲ್ಲಿ ಕೊಚ್ಚಿಹೋಗಿದ್ದು, ಆಕೆಯ ಶವ ಮಂಗಳವಾರ ಪತ್ತೆಯಾಗಿದೆ. ಜಿಲ್ಲೆಯಲ್ಲಿ 7 ಮನೆಗಳು ಭಾಗಶಃ ಕುಸಿದುಬಿದ್ದಿವೆ. 5 ಎಕರೆ ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಚಳ್ಳಕೇರೆ ತಾಲೂಕಿನ ವ್ಯಾಪ್ತಿಯಲ್ಲಿ ಐದು ಎಕರೆ ತೋಟಗಾರಿಕೆ (horticulture crop) ಬೆಳೆ ಹಾನಿಯಾಗಿವೆ. ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದ ಕೆಲವೆಡೆ ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಹದ ಮಳೆಯಾಗಿದೆ. ಶಿವಮೊಗ್ಗದ
ಕೊಡಗಿನಲ್ಲಿ ಮಳೆಯ ಅಬ್ಬರ ಹೆಚ್ಚಾದಂತೆ ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯಕ್ಕೆ (krishnarajasagar dam) ಒಳ ಹರಿವಿನ ಪ್ರಮಾಣ ಹೆಚ್ಚಾಗಿ ಪ್ರಸ್ತುತ ಜಲಾಶಯದ ನೀರಿನ ಮಟ್ಟ 107 ಅಡಿ ತುಂಬಿದೆ.
Share your comments