1. ಸುದ್ದಿಗಳು

ಇಂದಿನಿಂದ ಕೋವಿಡ್ ಲಸಿಕೆ ಅಭಿಯಾನ ಆರಂಭ- ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆ ಹಾಕಿಸಿಕೊಂಡ ಪ್ರಧಾನಿ

ದೇಶಾದ್ಯಂತ ಇಂದಿನಿಂದ (ಮಾರ್ಚ್ 1) ನಿರ್ಧಿಷ್ಟ ನಾಗರಿಕರ ಗುಂಪುಗಳಿಗೆ ಕೋವಿಡ್-19 ವ್ಯಾಕ್ಸಿನೇಷನ್ ನೋಂದಣಿ ಆರಂಭಿಸಲಾಗಿದೆ. ಹೌದು... 60 ವರ್ಷ ಮೇಲ್ಪಟ್ಟ ಹಾಗೂ 45 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಇತರೆ ಆನಾರೋಗ್ಯ (ಕೋಮಾರ್ಬಿಡಿಟಿ) ಸಮಸ್ಯೆಗಳನ್ನು ಹೊಂದಿರುವವರಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಸಜ್ಜಾಗಿದ್ದು, ಇದಕ್ಕಾಗಿ ಅರ್ಹ ಫಲಾನುಭವಿಗಳ ನೋಂದಣಿ ಕಾರ್ಯವನ್ನು ಆರಂಭವಾಗಿದೆ.. ಇಂದು ಬೆಳಗ್ಗೆ 9 ಗಂಟೆಯಿಂದಲೇ ನೋಂದಣಿ ಕಾರ್ಯ ಆರಂಭವಾಗಿದೆ.

60 ವರ್ಷ ವಯಸ್ಸಿನ ಅಥವಾ ಅದಕ್ಕಿಂತ ಮೇಲ್ಪಟ್ಟ ಜನರಿಗೆ ಈಗ ಲಸಿಕೆ ಪ್ರಮಾಣವನ್ನು ನೀಡಲಾಗುವುದು. ಇದಲ್ಲದೆ, ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿರುವ 45 ವರ್ಷ ವಯಸ್ಸಿನವರಿಗೆ ಸಹ ಲಸಿಕೆ ನೀಡಲಾಗುವುದು.

ದೇಶಾದ್ಯಂತ 10 ಸಾವಿರ ಸರ್ಕಾರಿ ಮತ್ತು 20 ಸಾವಿರ ಖಾಸಗಿ ಕೇಂದ್ರಗಳನ್ನು ಗುರುತಿಸಲಾಗಿದೆ. ಜನರು ತಮ್ಮ ಹತ್ತಿರದ ಕೇಂದ್ರಕ್ಕೆ ಹೋಗಿ ಲಸಿಕೆ ಪ್ರಮಾಣವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಗೆ ಉಚಿತ ಲಸಿಕೆ ಪ್ರಮಾಣವನ್ನು ನೀಡಲಾಗುವುದು ಎಂಬುದನ್ನು ನೆನಪಿನಲ್ಲಿಡಿ. ಖಾಸಗಿ ಆಸ್ಪತ್ರೆಗಳಲ್ಲಿ, ಲಸಿಕೆ ಪಡೆಯಲು ವೆಚ್ಚವನ್ನು ಭರಿಸಬೇಕಾಗುತ್ತದೆ.

ಲಸಿಕೆ ವೆಚ್ಚ ಎಷ್ಟು?

ಕರೋನಾ ಲಸಿಕೆಯ ಒಂದು ಡೋಸ್‌ನ ವೆಚ್ಚ-ವಿಘಟನೆಯು 150 ರೂಪಾಯಿ ಇದರಲ್ಲಿ ಸೇವಾ ತೆರಿಗೆಗೆ 100 ರೂಪಾಯಿ ಅಂದರೆ, ಖಾಸಗಿ ಆಸ್ಪತ್ರೆಯಲ್ಲಿ ವ್ಯಾಕ್ಸಿನೇಷನ್ ಮಾಡಲು ನಿಮಗೆ 250 ರೂಪಾಯಿ ಗರಿಷ್ಟ ವೆಚ್ಚ ಭರಿಸಬೇಕಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿತ ಮೊತ್ತವನ್ನು ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾಹಿತಿ ಕಳುಹಿಸಲಾಗಿದೆ.

ಒಂದು ಮೊಬೈಲ್ ಸಂಖ್ಯೆ ನೀಡಿ ಗರಿಷ್ಠ ನಾಲ್ಕು ಫಲಾನುಭವಿಗಳು ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಎನ್‌ಪಿಆರ್ ಸ್ಮಾರ್ಟ್ ಕಾರ್ಡ್, ಭಾವಚಿತ್ರ ಇರುವ ಪೆನ್ಶನ್ ಪತ್ರದಲ್ಲಿ ಯಾವುದಾದರೂ ಒಂದನ್ನು ಬಳಸಿ ನೋಂದಣಿ ಮಾಡಬಹುದು. ಕೇಂದ್ರ ಸರ್ಕಾರವು ಗುರುತಿಸಿರುವ ಹತ್ತು ಸಾವಿರಕ್ಕೂ ಅಧಿಕ ಹೆಚ್ಚು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಿಕೆ ನಡೆಯಲಿದೆ.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ ಲಸಿಕೆಯನ್ನು ಪ್ರಧಾನಿ ಹಾಕಿಸಿಕೊಂಡ ನಂತರ ಲಸಿಕೆ ಹಾಕಿಸಿಕೊಂಡ ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ,ಕೋವಿಡ್-19 ವಿರುದ್ಧ ಜಾಗತಿಕ ಮಟ್ಟದಲ್ಲಿ ಹೋರಾಡಲು ಸಮಯಕ್ಕೆ ಸರಿಯಾಗಿ ಕ್ಷಿಪ್ರವಾಗಿ ನಮ್ಮ ವಿಜ್ಞಾನಿಗಳು ಮತ್ತು ವೈದ್ಯರು ಕೆಲಸ ಮಾಡಿದ್ದಾರೆ. ಎರಡನೇ ಸುತ್ತಿನಲ್ಲಿ ಅರ್ಹರೆಲ್ಲರೂ ಲಸಿಕೆ ಹಾಕಿಸಿಕೊಳ್ಳಿ, ನಾವೆಲ್ಲರೂ ಒಟ್ಟು ಸೇರಿ ಕೋವಿಡ್ ಮುಕ್ತ ಭಾರತ ನಿರ್ಮಿಸೋಣ ಎಂದು ಮನವಿ ಮಾಡಿಕೊಂಡಿದ್ದಾರೆ.      

Published On: 01 March 2021, 01:46 PM English Summary: PM Modi gets first dose of Covid-19 vaccine Covaxin

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.