1. ಸುದ್ದಿಗಳು

ದಕ್ಷಿಣ ಭಾರತದ ಪ್ರಪ್ರಥಮ ವಂದೇ ಭಾರತ್‌ ಟ್ರೈನ್‌ಗೆ ಪಿಎಂ ಮೋದಿ ಚಾಲನೆ: ಈ ರೈಲಿನ ಸ್ಪೆಷಾಲಿಟಿ ಏನು..?

Maltesh
Maltesh
PM Narendra Modi flagged off Vande Bharat Express In Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣದ  ಪ್ಲಾಟ್‌ಫಾರಂ ನಂ. 7 ರಲ್ಲಿರುವ ಫ್ಲ್ಯಾಗ್‌ಆಫ್ ಪ್ರದೇಶಕ್ಕೆ ಪ್ರಧಾನಿಯವರು ಆಗಮಿಸಿದರು ಮತ್ತು ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಿಸಿದರು.

ಇದು ದೇಶದ ಐದನೇ ಮತ್ತು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು. ಇದು ಕೈಗಾರಿಕಾ ಕೇಂದ್ರ ಚೆನ್ನೈ, ತಂತ್ರಜ್ಞಾನ ಮತ್ತು ಸ್ಟಾರ್ಟ್ಅಪ್ ಕೇಂದ್ರ ಬೆಂಗಳೂರು ಮತ್ತು ಪ್ರಸಿದ್ಧ ಪ್ರವಾಸಿ ನಗರವಾದ ಮೈಸೂರಿನ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ.

ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಪರ್ಕ ಮತ್ತು ವಾಣಿಜ್ಯ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ. ಇದು ಜೀವನವನ್ನು ಸುಲಭಗೊಳಿಸುತ್ತದೆ. ಈ ರೈಲಿಗೆ ಬೆಂಗಳೂರಿನಿಂದ ಹಸಿರು ನಿಶಾನೆ ತೋರಿಸಿರುವುದು ಸಂತೋಷ ನೀಡಿದೆ.” ಎಂದು ಪ್ರಧಾನಿಯವರು ಟ್ವೀಟ್‌ ನಲ್ಲಿ ಹೇಳಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ವಿಶೇಷತೆಗಳೇನು..?

ವಂದೇ ಭಾರತ್ ಎಕ್ಸ್‌ಪ್ರೆಸ್ 2.0 ರೈಲು ಉನ್ನತ ಮಟ್ಟದ ಮತ್ತು ವಿಮಾನ ಪ್ರಯಾಣದಂತಹ ಅನುಭವಗಳನ್ನು ನೀಡುತ್ತದೆ. ಇದು ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೈಲು ಘರ್ಷಣೆ ತಪ್ಪಿಸುವ ವ್ಯವಸ್ಥೆ - ಕವಚ್ ಸೇರಿದಂತೆ ಸುಧಾರಿತ ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

PM Narendra Modi flagged off Vande Bharat Express In Bengaluru

ವಂದೇ ಭಾರತ್ 2.0 ರೈಲು ಕೇವಲ 52 ಸೆಕೆಂಡುಗಳಲ್ಲಿ ಗಂಟೆಗೆ 0 ಯಿಂದ 100 ಕಿಲೋಮೀಟರ್‌ಗಳ ವೇಗವನ್ನು ಮತ್ತು ಗಂಟೆಗೆ 180 ಕಿಲೋಮೀಟರ್‌ಗಳವರೆಗೆ ಗರಿಷ್ಠ ವೇಗವನ್ನು ತಲುಪುವಂತಹ ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿದೆ. ಸುಧಾರಿತ ವಂದೇ ಭಾರತ್ ಎಕ್ಸ್‌ಪ್ರೆಸ್ ಹಿಂದಿನ ಆವೃತ್ತಿಯ 430 ಟನ್‌ಗಳಿಗೆ ಹೋಲಿಸಿದರೆ 392 ಟನ್ ತೂಕವಿರುತ್ತದೆ. ಇದು ವೈ-ಫೈ ಕಂಟೆಂಟ್ ಆನ್ ಡಿಮ್ಯಾಂಡ್ ಸೌಲಭ್ಯವನ್ನೂ ಹೊಂದಿರಲಿದೆ.

ಪ್ರಯಾಣಿಕರಿಗೆ ಮಾಹಿತಿ ಮತ್ತು ಮನರಂಜನೆ ಒದಗಿಸಲು ಪ್ರತಿ ಬೋಗಿಯಲ್ಲಿ 32 ಇಂಚಿನ ಟಿವಿ ಪರದೆಗಳು ಇವೆ. ಹಿಂದಿನ ಆವೃತ್ತಿಯು 24 ಇಂಚು ಪರದೆ ಹೊಂದಿತ್ತು. ವಂದೇ ಭಾರತ್ ಎಕ್ಸ್‌ಪ್ರೆಸ್ ಪರಿಸರ ಸ್ನೇಹಿಯಾಗಿದೆ. ಏಕೆಂದರೆ ಎಸಿಗಳು ಶೇಕಡಾ 15 ರಷ್ಟು ಹೆಚ್ಚು ಇಂಧನ ದಕ್ಷತೆಯನ್ನು ಹೊಂದಿರುತ್ತವೆ. ಟ್ರ್ಯಾಕ್ಷನ್‌ ಮೋಟರ್‌ನ ಧೂಳು-ಮುಕ್ತ ಶುದ್ಧ ಗಾಳಿಯ ತಂಪಾಗಿಸುವಿಕೆಯೊಂದಿಗೆ, ಪ್ರಯಾಣವು ಹೆಚ್ಚು ಆರಾಮದಾಯಕವಾಗುತ್ತದೆ.

PM Narendra Modi flagged off Vande Bharat Express In Bengaluru

ಈ ಹಿಂದೆ ಎಕ್ಸಿಕ್ಯೂಟಿವ್ ವರ್ಗದ ಪ್ರಯಾಣಿಕರಿಗೆ ಮಾತ್ರ ನೀಡಲಾಗಿದ್ದ ಸೈಡ್ ರಿಕ್ಲೈನರ್ ಸೀಟ್ ಸೌಲಭ್ಯವನ್ನು ಈಗ ಎಲ್ಲಾ ವರ್ಗಗಳಿಗೂ ಲಭ್ಯವಾಗುವಂತೆ ಮಾಡಲಾಗುವುದು. ಎಕ್ಸಿಕ್ಯೂಟಿವ್ ಬೋಗಿಗಳು 180-ಡಿಗ್ರಿ ತಿರುಗುವ ಆಸನಗಳ ಹೆಚ್ಚುವರಿ ವೈಶಿಷ್ಟ್ಯವನ್ನು ಹೊಂದಿವೆ. ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಹೊಸ ವಿನ್ಯಾಸದಲ್ಲಿ, ಗಾಳಿಯ ಶುದ್ಧೀಕರಣಕ್ಕಾಗಿ ರೂಫ್-ಮೌಂಟೆಡ್ ಪ್ಯಾಕೇಜ್ ಘಟಕದಲ್ಲಿ (ಆರ್‌ ಎಂ ಪಿ ಯು) ಫೋಟೋ-ಕ್ಯಾಟಲಿಟಿಕ್ ಅಲ್ಟ್ರಾವಯಲೆಟ್‌ ಗಾಳಿ ಶುದ್ಧೀಕರಣ ವ್ಯವಸ್ಥೆಯನ್ನು ಸ್ಥಾಪಿಸಲಾಗಿದೆ.

ಚಂಡೀಗಢದ ವೈಜ್ಞಾನಿಕ ಸಲಕರಣೆಗಳ ಕೇಂದ್ರೀಯ ಸಂಸ್ಥೆ (ಸಿ ಎ ಐ ಒ) ಶಿಫಾರಸಿನಂತೆ, ತಾಜಾ ಗಾಳಿ ಮತ್ತು ಹಿಂತಿರುಗುವ ಗಾಳಿಯ ಮೂಲಕ ಬರುವ ಸೂಕ್ಷ್ಮಾಣುಗಳು, ಬ್ಯಾಕ್ಟೀರಿಯಾಗಳು, ವೈರಸ್‌ಗಳು ಇತ್ಯಾದಿಗಳನ್ನು ಫಿಲ್ಟರ್ ಮಾಡಲು ಮತ್ತು ಸ್ವಚ್ಛಗೊಳಿಸಲು ಈ ವ್ಯವಸ್ಥೆಯನ್ನು ಆರ್‌ ಎಂ ಪಿ ಯು ನ ಎರಡೂ ತುದಿಗಳಲ್ಲಿ ವಿನ್ಯಾಸಗೊಳಿಸಲಾಗಿದೆ ಮತ್ತು ಸ್ಥಾಪಿಸಲಾಗಿದೆ.

Published On: 11 November 2022, 02:44 PM English Summary: PM Narendra Modi flagged off Vande Bharat Express In Bengaluru

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.