ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿಯವರು ತಮ್ಮ 100 ನೇ ವಯಸ್ಸಿನಲ್ಲಿ ಶುಕ್ರವಾರ ಬೆಳಗ್ಗೆ ವಿಧಿವಶರಾಗಿದ್ದಾರೆ.
ಇದನ್ನೂ ಓದಿರಿ: ಸರ್ಕಾರದ ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ದೊರೆಯಲಿದೆ ಬರೋಬ್ಬರಿ 2 ಲಕ್ಷ ಮಾಸಿಕ ಪಿಂಚಣಿ!
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಇಂದು ವಿಧಿವಶರಾಗಿದ್ದಾರೆ. ಹೀರಾಬೆನ್ ಅವರು ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಟ್ವಿಟರ್ನಲ್ಲಿ ಭಾವನಾತ್ಮಕ ಸಂದೇಶ ನೀಡುವ ಮೂಲಕ ಪ್ರಧಾನಿ ಮೋದಿ ತಮ್ಮ ತಾಯಿಯ ಸಾವಿನ ಬಗ್ಗೆ ತಿಳಿಸಿದ್ದಾರೆ.
ತೊಗರಿ ಬೆಳೆಗೆ ನೆಟೆ ರೋಗ: ₹500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆಗೆ ಪ್ರಿಯಾಂಕ್ ಖರ್ಗೆ ಮನವಿ
ರಾಹುಲ್ ಗಾಂಧಿ ಟ್ವೀಟ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶ್ರೀಮತಿ ಹೀರಾಬೆನ್ ಅವರ ನಿಧನದ ಸುದ್ದಿ ಅತ್ಯಂತ ದುಃಖಕರವಾಗಿದೆ. ಈ ಕಷ್ಟದ ಸಮಯದಲ್ಲಿ , ನಾನು ಅವರಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪ ಮತ್ತು ಪ್ರೀತಿಯನ್ನು ವ್ಯಕ್ತಪಡಿಸುತ್ತೇನೆ.
ಈ ಕಷ್ಟದ ಸಮಯದಲ್ಲಿ, ನಾನು ಅವರಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪ ಮತ್ತು ಪ್ರೀತಿಯನ್ನು ವ್ಯಕ್ತಪಡಿಸುತ್ತೇನೆ.
ದ್ರೌಪದಿ ಮುರ್ಮು ಟ್ವೀಟ್: ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿ ಪ್ರಧಾನಿ ಮೋದಿಯವರ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ನೂರು ವರ್ಷಗಳ ಹೋರಾಟದ ಜೀವನ ಭಾರತೀಯ ಆದರ್ಶಗಳ ಸಂಕೇತವಾಗಿದೆ ಎಂದು ಅವರು ಟ್ವೀಟ್ನಲ್ಲಿ ಬರೆದಿದ್ದಾರೆ.
81.35 ಕೋಟಿ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ಉಚಿತ ಆಹಾರಧಾನ್ಯ: ಸಚಿವ ಸಂಪುಟ ನಿರ್ಧಾರ
ಅಮಿತ್ ಶಾ ಟ್ವೀಟ್: ಅಮಿತ್ ಶಾ ಅವರು ಪ್ರಧಾನಿ ಮೋದಿಯವರ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಪ್ರಧಾನಿ ನರೇಂದ್ರ ಮೋದಿಯವರ ಗೌರವಾನ್ವಿತ ತಾಯಿ ಹೀರಾಬೆನ್ ಅವರ ನಿಧನದ ಸುದ್ದಿ ತುಂಬಾ ದುಃಖ ತಂದಿದೆ.
ಬಿಎಸ್ಪಿ ವರಿಷ್ಠೆ ಮಾಯಾವತಿ ಸಂತಾಪ: ಬಿಎಸ್ಪಿ ವರಿಷ್ಠೆ ಮಾಯಾವತಿ ಕೂಡ ಪ್ರಧಾನಿ ಮೋದಿ ಅವರ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರು “ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ತಾಯಿ ಶ್ರೀಮತಿ ಹೀರಾಬೆನ್ ಅವರ ನಿಧನದ ಸುದ್ದಿ ತುಂಬಾ ದುಃಖವಾಗಿದೆ. ಅವರ ಇಡೀ ಕುಟುಂಬಕ್ಕೆ ನನ್ನ ಆಳವಾದ ಸಂತಾಪಗಳು. ಈ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರಿಗೆ ಮತ್ತು ಅವರ ಎಲ್ಲಾ ಪ್ರೀತಿಪಾತ್ರರಿಗೆ ಪ್ರಕೃತಿ ನೀಡಲಿ.
Share your comments