1. ಸುದ್ದಿಗಳು

ಪ್ರಧಾನಿ ಮೋದಿ, ಸಿ.ಎಂ ಸಿದ್ದರಾಮಯ್ಯ ಭೇಟಿ ಫಲಪ್ರದ ?

Hitesh
Hitesh
ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿ ಎಂ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಭೇಟಿ ಮಾಡಿದರು

ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಬಹುತೇಕ ಇಂಪ್ಯಾಕ್ಟ್‌ ಆಗಿದೆ.

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಇದೆ. ಅಲ್ಲದೇ ರೈತರು ಸಹ ಸಂಕಷ್ಟದಲ್ಲಿ ಇದ್ದಾರೆ.

ಹೀಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಿ.ಎಂ ಮೋದಿಯನ್ನ ಭೇಟಿ ಮಾಡಿದ್ದಾರೆ.    

ಮುಖ್ಯಮಂತ್ರಿ Siddaramaiah ಅವರು ಮಂಗಳವಾರ ನವದೆಹಲಿಯಲ್ಲಿ ಪ್ರಧಾನಮಂತ್ರಿ Narendra Modi ಅವರನ್ನು ಭೇಟಿಯಾಗಿದ್ದಾರೆ.

ಈ ವೇಳೆ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿದ್ದಾರೆ.   

ಶೀಘ್ರವೇ 18,177 ಕೋಟಿ ರೂಪಾಯಿ ಪರಿಹಾರ ಕೊಡುವಂತೆ  ಮನವಿ ಮಾಡಿದ್ದಾರೆ.

Prime Minister Modi ಅವರಿಗೆ ಪರಿಸ್ಥಿತಿ ವಿವರಿಸಲಾಗಿದೆ.

ಈ ಮೊತ್ತದಲ್ಲಿ 4,663 ಕೋಟಿ ರೂಪಾಯಿ ಇನ್‌ಪುಟ್‌ ಸಬ್ಸಿಡಿಗೆ ಬೇಕಿದೆ.

ಇನ್ನುಳಿದ 12,577 ಕೋಟಿ ರೂಪಾಯಿ ತುರ್ತು ಪರಿಹಾರ ನೀಡಬೇಕಿದೆ.

566 ಕೋಟಿ ರೂಪಾಯಿ ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂಪಾಯಿ

ಜಾನುವಾರುಗಳ ಸಂರಕ್ಷಣೆಗಾಗಿ ಕೊಡಿ ಎಂದು ಕೇಳಿದ್ದಾರೆ. 

ಕರ್ನಾಟಕದಲ್ಲಿ ಈ ಬಾರಿ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳು ಬರಪೀಡಿತವಾಗಿವೆ.  

196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ.

ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದೆ.

Small ಮತ್ತು to small ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

NDRF ನಿಂದ 4,663 ಕೋಟಿ ರೂಪಾಯಿ (Input subsidy) ಇನ್‌ ಪುಟ್ಸ್‌ ಸಬ್ಸಿಡಿ  ನೀಡಿ ಎಂದಿದ್ದಾರೆ.

ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದೆ.

ಇದು 8 ವರ್ಷ ಹಳೆಯ ಮಾಹಿತಿಯಾಗಿದೆ.

ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದೆ.

ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ.

ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾರೆ.

ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದೇನೆ.

ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ

ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದೇನೆ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಸಿ .ಎಂ ಸಿದ್ದರಾಮಯ್ಯ ಅವರು ಭೇಟಿ ಮಾಡಿದರು. ಕಂದಾಯ ಸಚಿವ ಕೃಷ್ಣಬೈರೇಗೌಡ ಇದ್ದಾರೆ

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು.

ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿದೆ.

ಅದರ ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು.

ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901 ಕೋಟಿ ರೂ.

ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು.

ಇದರಲ್ಲಿ ತುರ್ತು ಪರಿಹಾರದ12,577 ಕೋಟಿ ರೂ. ಮೊತ್ತವೂ ಸೇರಿದೆ.

ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು.

ಇದರಿಂದ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರ ಕೇಳಿದ್ದೇವೆ ಎಂದಿದ್ದಾರೆ ಸಿ.ಎಂ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಸಿ .ಎಂ ಸಿದ್ದರಾಮಯ್ಯ ಅವರು ಭೇಟಿ ಮಾಡಿದರು. ಕಂದಾಯ ಸಚಿವ ಕೃಷ್ಣಬೈರೇಗೌಡ ಇದ್ದಾರೆ

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದೆ. ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ.

ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ.

ಈ ಕುರಿತು ಪ್ರಧಾನಿಗೆ ನರೇಂದ್ರ ಮೋದಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದಿದ್ದಾರೆ.

ಬರದಿಂದ ಸಂಕಷ್ಟದಲ್ಲಿರು ಕರ್ನಾಟಕದ ರೈತರ ಹಿತರಕ್ಷಣೆಯ ದೃಷ್ಟಿಯಿಂದ ಆದಷ್ಟು ಬೇಗ ಪರಿಹಾರ

ಬಿಡುಗಡೆ ಮಾಡುವಂತೆ ಕೋರಿದ್ದೇನೆ. ಎಲ್ಲದಕ್ಕೂ ಪ್ರಧಾನಿ ಸಮಾಧಾನವಾಗಿ ಪ್ರತಿಕ್ರಿಯಿಸಿದ್ದಾರೆ ಎಂದಿದ್ದಾರೆ.  

ಪೂರಕ ಮಾಹಿತಿ & ಚಿತ್ರ: CMofKarnataka

Published On: 20 December 2023, 11:04 AM English Summary: Prime Minister Modi, CM Siddaramaiah's meeting success?

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.