ಶಿವಮೊಗ್ಗ: ಎಸ್.ಸಿ.ಪಿ. ಹಾಗ ಟಿ.ಎಸ್.ಪಿ ಯೋಜನೆಯಡಿ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಆರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ತಾಲೂಕು ಗ್ರಾಮೀಣ ಉಪವಿಭಾಗ ಮೆಸ್ಕಾಂ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗೆರೆ, ಹೊಳಲೂರು, ಗಾಜನೂರು ಮತ್ತು ಸಂತೇಕಡೂರು ಶಾಖಾ ವ್ಯಾಪ್ತಿಯ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರುವ ರೈತರು ಎಸ್.ಸಿ.ಪಿ. ಹಾಗ ಟಿ.ಎಸ್.ಪಿ ಯೋಜನೆಯಡಿ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಆರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮೆಸ್ಕಾ ಕಚೇರಿಯಿಂದ ನಿಗಧಿತ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 7/07/2023ರೊಳಗಾಗಿ ಸಲ್ಲಿಸುವಂತೆ ಗ್ರಾ.ಉ.ವಿ. ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬಹುಮಾನ ಹಣಕ್ಕಾಗಿ ಅರ್ಜಿ ಆಹ್ವಾನ
ಶಿವಮೊಗ್ಗ: 2023-24 ಸಾಲಿಗೆ ಸಾಗರ ಸಮಾಜ ಕಲ್ಯಾಣ ಇಲಾಖೆಯು ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಪಿ.ಯು.ಸಿ ಮತ್ತು 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ ಕೋರ್ಸ್‍ಗಳಿಗೆ ರೂ.20,000/-, ಪದವಿ ರೂ.25,000/- , ಸ್ನಾತಕೋತ್ತರ ಪದವಿ ಪದವಿ ರೂ.30,000/- ಹಾಗೂ ಕೃಷಿ/ ಇಂಜಿನಿಯರಿಂಗ್/ ವೈದ್ಯಕೀಯ/ ಪಶುವೈದ್ಯಕೀಯ ರೂ.35,000/- ಗಳನ್ನು ಪಡೆಯಲು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ www.tw.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಾರ್ಡ್ ಕಾಪಿಯನ್ನು ಕಚೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08183-229402/9480843192 ಗಳನ್ನು ಸಂಪರ್ಕಿಸುವಂತೆ ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Share your comments