ಬಂಗಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ. ರಾಜ್ಯದಲ್ಲಿ ಸೆಪ್ಟೆಂಬರ್ 15ರವರೆಗೂ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಧಿಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಹೆಚ್ಚು ಮಳೆಯಾಗಲಿದ್ದು, ಅಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳದೆ ಕೆಲ ದಿನಗಳಿಂದ ಶಿವಮೊಗ್ಗ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇದೆ 15ರವರೆಗೂ ಮಳೆ ಮುಂದುವರೆಯಲಿದೆ ಎಂದು ಭಾರತಿಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಳದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ.
ಕರಾವಳಿ ಕರ್ನಾಟಕದ ಭಾಗಗಳು ಮತ್ತು ತೆಲಂಗಾಣ, ಕೇರಳ, ಉತ್ತರ ಪ್ರದೇಶ, ಜಮ್ಮು- ಕಾಶ್ಮೀರ, ಲಡಾಖ್, ಹರಿಯಾಣ, ದೆಹಲಿ, ಪಂಜಾಬ್, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ವಿದರ್ಭ, ಕೊಂಕಣ ಮತ್ತು ಗೋವಾಮತ್ತು ಪ್ರತ್ಯೇಕ ಭಾಗಗಳಲ್ಲಿ ಇಂದು ಸಹ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಕ್ಷಿಣ ಮತ್ತು ಆಗ್ನೇಯ ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಛತ್ತೀಸ್ಗಢ್ ಮತ್ತು ಮಧ್ಯ ಮಹಾರಾಷ್ಟ್ರಗಳ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.
Share your comments