ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕುಸಿತದಿಂದ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ, ಮುಂದಿನ 4 ದಿನ ಮುಂದುವರೆಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಮೈಸೂರು ಮತ್ತು ಚಾಮರಾಜನಗರದಲ್ಲಿ ಆಗಸ್ಟ್ 28 ರಂದು ವ್ಯಾಪಕ ಮಳೆ ಬೀಳುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೆ, ಈ ಭಾಗಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳುವ ಸಾಧ್ಯತೆಯಿರುವುದರಿಂದ ಆಗಸ್ಟ್ 29 ಮತ್ತು 30 ರಂದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಮೋಡ ಮುಸುಕಿದ ವಾತಾರವಣ ಮುಂದುವರೆಯಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಡ್ಯದಲ್ಲಿ ಮುಂದಿನ 4 ದಿನ ಯೆಲ್ಲೋ ಅಲರ್ಟೋ ಘೋಷಣೆ ಇರಲಿದ್ದು, ಹಲವು ಬಾರಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಗುಡುಗು ಸಹಿತ ಮಳೆಯಾಗಲಿದೆ.
ರಾಜ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಅರ್ಭಟ ಮುಂದುವರಿದಿದೆ. ಕೆಲವೆಡೆ ಜಿಟಿಜಿಟಿ ಮಳೆಯಾದರೆ ಇನ್ನೂ ಕೆಲವೆಡೆ ಧಾರಾಕಾರ ಮಳೆಯಾಗಿದೆ.ದಕ್ಷಿಣ ಒಳನಾಡಿನ ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ.
ಕಳೆದ ಕೆಲ ದಿನಗಳಿಂದ ಜಿಟಿಜಿಟಿ ಮಳೆ ಸುರಿಯುತ್ತಿದ್ದ ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನ ನಂತರ ಭರ್ಜರಿ ಮಳೆಯಾಗಿದೆ. ನಾಲ್ಕೈದು ಕಡೆ ಮರ ಬಿದ್ದ ಘಟನೆ ವರದಿಯಾಗಿದೆ.ಮಲ್ಲೇಶ್ವರ, ಯಶವಂತಪುರ, ಬಸವೇಶ್ವರನಗರ, ವಿಜಯನಗರ, ಜಕ್ಕೂರ, ಸಾರಕ್ಕಿ, ಕೆಂಗೇರಿ, ಕೆ.ಆರ್.ಪುರ, ಗೊಟ್ಟೆಗೇರೆ, ಪುಲಕೇಶಿನಗರ, ವಿದ್ಯಾರಣ್ಯಪುರ, ಪುಲಕೇಶಿ ನಗರ ವ್ಯಾಪ್ತಿಯಲ್ಲಿ ಹೆಚ್ಚು ಮಳೆ ಸುರಿದಿದೆ.
Share your comments