ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜನವರಿ 8ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ರಾಜ್ಯದಲ್ಲಿ ಕರಾವಳಿ ಜಿಲ್ಲೆಗಳು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಜನವರಿ 8ರಂದು ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, 9ರಿಂದ ಮಳೆ ದಿಢೀರ್ ತಗ್ಗಲಿದೆ.
ಜನವರಿ 7 ರಂದು ಭಾರಿಯ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯಾಗಬಹುದು.
ರಾಜ್ಯದೆಲ್ಲೆಡೆ ಮೋಡ ಕವಿದ ವಾತಾವರಣವಿದೆ. ಕಲಬುರಗಿ ಜಿಲ್ಲೆಯ ಕೆಲವೆಡೆ ತುಂತುರು ಮಳೆಯಾಯಿತು. ಇದೇ ರೀತಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಆಗಾಗ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಎಲ್ಲೆಡೆ ಮೋಡ ಮುಸುಕಿದ ವಾತಾವರಣವಿದೆ.
Share your comments