ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮಳೆ ತುಸು ಬಿಡುವು ನೀಡಿದೆ. ಆದರೆ, ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ. ಎಲ್ಲೆಲ್ಲಿ ಮಳೆ ಇಲ್ಲಿದೆ ವರದಿ…
ಅಡಿಕೆ ಚುಕ್ಕೆರೋಗ ತಡೆಗೆ 10 ಕೋಟಿ ರೂ. ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಸದ್ಯ ಮುಂದಿನ 24 ಗಂಟೆಗಳ ಅವಧಿಯಲ್ಲಿ ಯಾವುದೇ ಪ್ರದೇಶದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇಲ್ಲ.
ಕಳೆದ 24 ಗಂಟೆಗಳ ಅವಧಿಯಲ್ಲಿ ಕರಾವಳಿಯ ವಿವಿಧೆಡೆ ಮಳೆ ಆಗಿದ್ದು, ಉಳಿದಂತೆ ಬಹುತೇಕ ಪ್ರದೇಶದಲ್ಲಿ ಒಣಹವೆ ಮುಂದುವರಿದಿತ್ತು.
ಮುಂದಿನ 24 ಗಂಟೆಗಳಲ್ಲಿ (ಬುಧವಾರ) ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ.
ಈ ಭಾಗದಲ್ಲಿ ಹಗುರದಿಂದ ಕೂಡಿದ ಮಳೆ ಆಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
ಸಕ್ಕರೆ ರಫ್ತಿಗೆ ಭಾರತ ನಿರ್ಬಂಧ: ವಿಶ್ವದ ವಿವಿಧೆಡೆ ಸಮಸ್ಯೆ!
ಬುಧವಾರ ಕರಾವಳಿಯ ವಿವಿಧೆಡೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಉಳಿದಂತೆ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ. ಮುಂದಿನ 24 ಗಂಟೆಗಳ ಕಾಲ ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಆಗಲಿದ್ದು, ಉಳಿದೆಡೆ ಒಣಹವೆ ಇರಲಿದೆ.
ಬುಧವಾರ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಧಾರ್ ಕಾರ್ಡ್ಗಾಗಿ 24 ವರ್ಷ ಬಿಟ್ಟು ಮನೆಗೆ ಬಂದ ವ್ಯಕ್ತಿ!
ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಇನ್ನು ಮಂಗಳವಾರ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ
ಅತಿ ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್ ಬೀದರ್ನಲ್ಲಿ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
Share your comments