1. ಸುದ್ದಿಗಳು

ನಾಳೆ ಕರಾವಳಿಯ ಈ ಭಾಗಗಳಲ್ಲಿ ಮಳೆ ಸಂಭವ- ಹವಾಮಾನ ಇಲಾಖೆ

Maltesh
Maltesh
Rain likely in these parts of the coast tomorrow - Meteorological Department

19 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ

ಗುಡುಗು ಮುನ್ನೆಚ್ಚರಿಕೆ: ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ. ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ. 19 ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಗಳಿರುತ್ತದೆ.

Published On: 17 August 2023, 05:36 PM English Summary: Rain likely in these parts of the coast tomorrow - Meteorological Department

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.