Heavy Rain : ದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಎಲ್ಲೆಲ್ಲಿ ತಿಳಿಯಿರಿ..
ರಾಜ್ಯದಲ್ಲಿ ಒಂದು ವಾರದಿಂದ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಉತ್ತಮ ಮಳೆಯಾಗುತ್ತಿದೆ. ಮುಂದಿನ ನಾಲ್ಕು ದಿನದಿಂದ ಐದು ದಿನಗಳವರೆಗೆ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಭಾಗದಲ್ಲಿ ಗುಡಗು ಸಹಿತ ಮಳೆಯಾಗಲಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಭಾಗಗಳಲ್ಲಿ ಹಗುರು ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಗಾಳಿ ಪ್ರತಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸಲಿದೆ.
ಬೆಂಗಳೂರಿನಲ್ಲಿಂದು ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವೆಡೆ ಮಳೆ ಬೀಳುವ ಸಾಧ್ಯತೆಗಳಿವೆ.
ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಇರಲಿದ್ದು, ಗುಡುಗು-ಮಿಂಚು ಮತ್ತು ಬಿರುಗಾಳಿ ಸಹಿತ ಸಣ್ಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ
ಈ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ (Yellow Alert)
ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ನೀಡಲಾಗಿದೆ. ಇಂದು ಮತ್ತು ನಾಳೆ ಈ ಭಾಗದಲ್ಲಿ ಮಳೆಯಾಗಲಿದೆ ಎಂದು ವರದಿ ಇದೆ.
ದೇಶದ ಹಲವು ಭಾಗಗಳಲ್ಲಿ ಜೋರು ಮಳೆ
ದೇಶದ ಹಲವು ಭಾಗಗಳಲ್ಲಿ ಜೋರು ಮಳೆಯಾಗುವ ಕುರಿತು ಎಚ್ಚರಿಕೆಯನ್ನು ನೀಡಲಾಗಿದೆ. ಅಂಡಮಾನ್-ನಿಕೋಬಾರ್ ದ್ವೀಪಗಳ ವಿವಿಧ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಅಲ್ಲದೇ ಆಂಧ್ರ ಪ್ರದೇಶ, ಕರ್ನಾಟಕ, ಕೇರಳ ಮತ್ತು ಮಾಹೆಯ ಕೆಲವು ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಈ ಪ್ರದೇಶಗಳಲ್ಲಿ ಮಿಂಚು, ಗುಡುಗು, ಗಾಳಿ ಅತಿ ವೇಗದಲ್ಲಿ ಬೀಸುವ ಸಾಧ್ಯತೆಯೂ ವ್ಯಕ್ತವಾಗಿದೆ.
Share your comments