1. ಸುದ್ದಿಗಳು

“ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ”- ಮಾಜಿ ಸಿಎಂ ಯಡಿಯೂರಪ್ಪ!

Kalmesh T
Kalmesh T
Shivamogga airport does not need my name - former CM Yeddyurappa!

ರೈತಸ್ನೇಹಿ ಮುಖ್ಯಮಂತ್ರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಹೆಸರನ್ನು ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಇಡುವ ಕುರಿತು ಹೇಳಿದ್ದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರಿಗೆ ಯಡಿಯೂರಪ್ಪನವರು ಪತ್ರದ  ಮೂಲಕ ಬೇಡ ಎಂದು ತಿಳಿಸಿದ್ದಾರೆ. ಹಾಗಿದ್ದರೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪತ್ರದಲ್ಲಿ ಏನಿದೆ ಎಂಬುದನ್ನು ಮುಂದೆ ನೀಡಲಾಗಿದೆ.

ಇದನ್ನೂ ಓದಿರಿ:

ರಸಗೊಬ್ಬರ ಕೊರತೆ ಇಲ್ಲ; 4 ಸಾವಿರ ಮೆಟ್ರಿಕ್‌ ಟನ್‌ಗೂ ಅಧಿಕ ರಸಗೊಬ್ಬರ ದಾಸ್ತಾನಿಗೆ-ಬಿ.ಸಿ. ಪಾಟೀಲ್‌

ಯಡಿಯೂರಪ್ಪನವರು ಬರೆದ ಪತ್ರದಲ್ಲಿ ಏನಿದೆ?

ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚೆಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದಗಳು.

ಶಿವಮೊಗ್ಗದ ಈ ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ. ತಮ್ಮ ಈ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಘಸಂಸ್ಥೆಗಳು ಹಾಗೂ ಎಲ್ಲ ಮುಖಂಡರುಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡುವಂತೆ ಹೈಕೋರ್ಟ್‌ ಸೂಚನೆ

ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲ ಸೇವೆ ಮಾತ್ರ ಹಾಗೂ ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ.

ಆದುದರಿಂದ, ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ.

ಕರ್ನಾಟಕದಲ್ಲಿ ಕೇಜ್ರಿವಾಲ್ ಅಲೆ! ಇಲ್ಲೂ ಸೃಷ್ಟಿಸಲಿದ್ದಾರಾ ಆಮ್ ಆದ್ಮಿ ಪಾರ್ಟಿಯ ನೆಲೆ ?

Published On: 24 April 2022, 05:45 PM English Summary: Shivamogga airport does not need my name - former CM Yeddyurappa!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.