1. ಸುದ್ದಿಗಳು

ಎಸ್ಎಸ್ಎಲ್ಸಿ ಪರೀಕ್ಷೆಗೆ ಹೊಸ ಗೈಡ್ ಲೈನ್ ಪ್ರಕಟಿಸಿದ ಸರ್ಕಾರ- ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಪಾಸ್

Exam

ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ  ಈ ಬಾರಿಯ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಗೈಡ್​​ಲೈನ್ಸ್​ ಮೂಲಕ ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಪರೀಕ್ಷೆ ವೇಳೆ ಕೋವಿಡ್​ ನಿಯಮ ಕಡ್ಡಾಯವಾಗಿದೆ. ಈ ಬಗ್ಗೆ ಸರ್ಕಾರ ಹೊರಡಿಸಿರುವ ಮಾರ್ಗ ಸೂಚಿಯಲ್ಲಿ ತಿಳಿಸಲಾಗಿದೆ.

ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲಾಗುವುದು.  ಮೌಲ್ಯಾಂಕನ ಹಾಗೂ ವಿದ್ಯಾಥಿಗಳು ಗಳಿಸುವ ಅಂಕಗಳ ಆಧಾರದ ಮೇಲೆ ನಾಲ್ಕು ಗ್ರೇಡ್ ನೀಡಲಾಗುತ್ತದೆ. ಆಂತರಿಕ ಮೌಲ್ಯಮಾಪನ ಆಧರಿಸಿ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತೀರ್ಣ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ.

2020-21ನೇ ಸಾಲಿನ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ನಿಯಮನಾಸುರಾ ಕನಿಷ್ಠ ಉತ್ತೀರ್ಣತೆಯ ಅಂಕ ನೀಡಿ , ವಿದ್ಯಾರ್ಥಿಗಳು ಗಳಿಸುವ ಅಂಕದ ಆಧಾರದಲ್ಲಿ ಶ್ರೇಣಿ ನೀಡಲು ಸೂಚಿಸಲಾಗಿದೆ.

90 ರಿಂದ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಎ+, 80 ರಿಂದ 89 ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಎ ಗ್ರೇಡ್, 60 ರಿಂದ 79 ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಬಿ ಗ್ರೇಡ್ ಮತ್ತು 35 ರಿಂದ 59 ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಸಿ. ಶ್ರೇಣಿ ನೀಡಲು ತಿಳಿಸಿದೆ. ಪ್ರತಿ ವಿಷಯದ ಪರೀಕ್ಷೆ 40 ಅಕಂಗಳಿಗೆ ನಡೆಯಲಿದ್ದು, ಅವುಗಳನ್ನು 80 ಅಂಕಗಳಿಗೆ ಪರಿವರ್ತಿಸಲಾಗುವುದು. (ಪ್ರಥಮ ಭಾಷೆ 125 ಅಂಕ) ಒಟ್ಟು 625 ಅಂಕಕ್ಕೆ ಅನುಗುಣವಾಗಿ ಫಲಿತಾಂಶ ನೀಡಲು ಸೂಚಿಸಿದೆ. ಪ್ರಥಮ ಭಾಷೆಗೆ ಮಾತ್ರ 25 ಆಂತರಿಕ ಅಂಕಗಳಿರಲಿದೆ. ಉಳಿದ ಭಾಷೆಗಳಿಗೆ ನಡೆಯುವ ಪರೀಕ್ಷೆಗೆ 20 ಆಂತರಿಕ ಅಂಕಗಳಿರುತ್ತವೆ.

ಪರೀಕ್ಷಾ ಕೇಂದ್ರಗಳ ಹೆಚ್ಚಳ

ಈ ಹಿಂದೆ ಸುಮಾರು 3 ಸಾವಿರ ಪರೀಕ್ಷಾ ಕೇಂದ್ರಗಳನ್ನು ರಚಿಸಿ ಪರೀಕ್ಷೆ ನಡೆಸಲಾಗುತ್ತಿತ್ತು. ಆದರೆ ಈ ವರ್ಷ 6ಸಾವಿರಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಒಂದು ಕೊಠಡಿಗೆ 12 ವಿದ್ಯಾರ್ಥಿಗಳಂತೆ ಒಂಡು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗುತ್ತಿದೆ.

ಆರು ವಿಷಯಗಳಿಗೆ ಪರೀಕ್ಷೆ ನಡೆಸಿದ್ರೆ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ 6 ದಿನಗಳು ಬರುವುದು ಕಷ್ಟವಾಗುತ್ತೆ. ಆದ್ರೆ ಮುಂದಿನ ಉನ್ನತ ಶಿಕ್ಷಣದ ವ್ಯಾಸಂಗಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಮುಖ್ಯವಾಗಿದೆ. ಹೀಗಾಗಿ ವಿದ್ಯಾರ್ಥಿಗಳ ಸುರಕ್ಷತಾ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಎರಡು ದಿನಗಳಲ್ಲಿ(ಒಂದು ದಿನ ಕೋರ್​ ವಿಷಯಗಳು ಮತ್ತು ಇನ್ನೊಂದು ದಿನ ಭಾಷಾ ವಿಷಯಗಳು) ಪರೀಕ್ಷೆಯನ್ನು ನಡೆಸಲಾಗುವುದು. ಇನ್ನು ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೂ ನಿಯಮಾನುಸಾರ ಕನಿಷ್ಠ ಉತ್ತೀರ್ಣತಾ ಅಂಕಗಳನ್ನು ನೀಡಲಾಗುವುದು ಎಂದು ಸರ್ಕಾರ ಹೇಳಿದೆ.

ರಾಜ್ಯದಲ್ಲಿ ಜುಲೈ 3ನೇ ವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸುರೇಶ್ ಕುಮಾರ್

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಜುಲೈ 3ನೇ ವಾರ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ಕೋವಿಡ್ ಸೋಂಕು ಇರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿ್ಗೆಗೆ ಪರೀಕ್ಷೆ ನಡೆಸಲು ಉದ್ದೀಶಿಸಲಾಗಿದ್ದು ಈ ತಿಂಗಳಾಂತ್ಯದ ವೇಳೆಗೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಅವರು, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಅದಕ್ಕಾಗಿ ಎಲ್ಲಾ ಸಿದ್ದತೆ ನಡೆಯುತ್ತಿದೆ. ಪರೀಕ್ಷಾ ದಿನಾಂಕ ಪ್ರಕಟವಾದ ಮೊದಲ ದಿನ ಸಮಾಜ ವಿಜ್ಞಾನ, ವಿಜ್ಞಾನ, ಗಣಿತ ವಿಷಯಗಳ ಪರೀಕ್ಷೆ ನಡೆಯಲಿದ್ದು, ಎರಡನೇ ದಿನ ಭಾಷಾವಾರು ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ‌

Published On: 20 June 2021, 09:23 AM English Summary: SSLC Exam guidelines

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.