ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರಿಂದ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈಗ ಆಂಧ್ರಪ್ರದೇಶವೂ ಸಹ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದು ಪಡಿಸಲು ನಿರ್ಧಾರ ತೆಗೆದುಕೊಂಡಿದೆ
ದೇಶದ ಹಲವು ರಾಜ್ಯಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಒಂದಿಲ್ಲೊಂದು ಕುತ್ತು ಎದುರಾಗುತ್ತಲೇ ಇದೆ. ಪ್ರಾರಂಭದಲ್ಲಿ ತೆಲಂಗಾಣ, ತಮಿಳುನಾಡು, ಪಂಜಾಬ್ ಸೇರಿ ಹಲವು ರಾಜ್ಯಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದುಪಡಿಸಿ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣ ಎಂದು ಘೋಷಿಸಲಾಗಿದೆ.
ಈಗ ನೆರೆಯ ತೆಲಂಗಾಣ ಕೈಗೊಂಡ ತೀರ್ಮಾನವನ್ನೇ ಆಂಧ್ರಪ್ರದೇಶವೂ ಕೈಗೊಂಡಿದೆ. ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುವುದಿಲ್ಲ. ವಿದ್ಯಾರ್ಥಿಗಳು ಇಂಟರನಲ್ ಪರೀಕ್ಷೆಯಲ್ಲಿ ತೆಗೆದುಕೊಂಡಿರುವ ಅಂಕಗಳ ಆಧಾರದ ಮೇಲೆ ಗ್ರೇಡ್ ನೀಡಲಾಗುವುದು ಎಂದು ಆಂಧ್ರಪ್ರದೇಶ ಶಿಕ್ಷಣ ಸಚಿವ ಆದಿಮುಲುಪು ಸುರೇಶ್ ಹೇಳಿಕೆ ನೀಡಿದ್ದಾರೆ.
ಆಂಧ್ರಪ್ರದೇಶದಲ್ಲಿಯೂ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು
Published On: 21 June 2020, 12:42 PM
English Summary: sslc-exams-cancelled-in-andhra-pradesh
Share your comments