ಸರ್ಕಾರದ ಆದೇಶ ಮೀರಿ 1ರಿಂದ 5ರವರೆಗಿನ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.
‘ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ನಿರ್ದೇಶನದ ಅನ್ವಯ 6ನೇ ತರಗತಿಯಿಂದ ಮೇಲಿನ ತರಗತಿಗಳನ್ನು ಮಾತ್ರ ಆರಂಭಿಸಲು ಅನುಮತಿ ನೀಡಲಾಗಿದೆ. ಆದರೆ, ರಾಜ್ಯದ ಹಲವೆಡೆ ಕೆಲವು ಖಾಸಗಿ ಶಾಲೆಗಳು 1ರಿಂದ 5ನೇ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಕುರಿತು ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ಇಂಥ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಅವರು ಇಲಾಖೆಯ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದ್ದಾರೆ.
ಆದರೆ ರಾಜ್ಯದ ಹಲವೆಡೆ ಕೆಲವು ಖಾಸಗಿ ಶಾಲೆಗಳು 1 ರಿಂದ 5ನೇ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಕುರಿತು ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಇಂತಹ ಶಾಲೆಗಳ ಕುರಿತು ಕ್ರಮ ಕೈಗೊಳ್ಳಬೇಕೆಂದು ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತಾಲೂಕು ಮಟ್ಟದಲ್ಲಿ ಪರಿಶೀಲನಾ ತಂಡಗಳನ್ನು ರಚಿಸಿ, ಈ ರೀತಿ ಅನಧಿಕೃತವಾಗಿ 1 ರಿಂದ 5ನೇ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳ / ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಕೂಡಲೇ ಸುತ್ತೋಲೆ ಹೊರಡಿಸಬೇಕೆಂದು ಸುರೇಶ್ ಕುಮಾರ್ ಇಲಾಖೆಯ ಆಯಕ್ತರು ಮತ್ತು ಅಪರ ಆಯುಕ್ತರುಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಭೀತಿ
ರಾಜ್ಯದಲ್ಲಿ ಕಳೆದ 14 ದಿನಗಳಲ್ಲಿ ಕೋರೋನೋ ಸೋಂಕಿನ ಪಾಸಿಟೀವ್ ಪ್ರಕರಣ ಹೆಚ್ಚಾಗಿದ್ದು ಎರಡನೇ ಅಲೆಯ ಮುನ್ಸೂಚನೆಯಾಗಿದೆ. ಹೀಗಾಗಿ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ,ಸಾಮಾಜಿಕ ಅಂತರಕ್ಕೆ ಒತ್ತು ನೀಡಬೇಕು .ಇಲ್ಲದಿದ್ದರೆ ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ಲಾಕ್ಡೌನ್ ಮಾಡುವ ಪರೀಕ್ಷೆಗೆ ಅವಕಾಶ ಮಾಡಿಕೊಡಬೇಡಿ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಿ. ಇಲ್ಲದಿದ್ದರೆ ಅನಿವಾರ್ಯವಾಗಿ ದಂಡ ವಿಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಕೋವಿಡ್ 19ರ ಕುರಿತು ತಜ್ಞರು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ,ಉಡುಪಿ, ತುಮಕೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ ಎಂದರು
ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸಬೇಕಾಗಿದೆ. ಆರೋಗ್ಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದಿದ್ದಾರೆ. ಆದರೆ ಇತರ ಮುಂಚೂಣಿಯ ಸಿಬ್ಬಂದಿಯಲ್ಲಿ ಶೇ. 58 ರಷ್ಟು ಮಾತ್ರ ಲಸಿಕೆ ಪಡೆದಿದ್ದಾರೆ. ದೊಡ್ಡ ಅಪಾರ್ಟ್ ಮೆಂಟ್ ಗಳಲ್ಲಿ ಲಸಿಕೆ ಹಾಕಲು ಕ್ರಮ ವಹಿಸುವಂತೆ ಸೂಚಿಸಿದರು.
Share your comments