ಕೊರೋನಾ ವೈರಸ್ನ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಲಾಕ್ಡೌನ್ ಸಡಿಲಗೊಳಿಸಿದ್ದರಿಂದ ಇನ್ನೂ ಆತಂಕ ಹೆಚ್ಚಾಗುತ್ತಿದ್ದರಿಂದ ಯಾವುದೇ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸಿ ಮುಂದಿನ ತರಗತಿಗೆ ಕಳುಹಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸೋಮವಾರ ಹೇಳಿದ್ದಾರೆ.
'10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಅವರ ಆಂತರಿಕ ಮೌಲ್ಯಮಾಪನ ಅಂಕಗಳ ಆಧಾರದ ಮೇಲೆ ಶ್ರೇಣಿ ನೀಡುವ ಮೂಲಕ ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು. ಉನ್ನತ ಮಟ್ಟದ ಪರಿಶೀಲನಾ ಸಬೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 10ನೇ ತರಗತಿಯ 5.35 ಲಕ್ಷ ವಿದ್ಯಾರ್ಥಿಗಳಿದ್ದು, ಎಲ್ಲರನ್ನೂ ತೇರ್ಗಡೆ ಮಾಡಲಾಗುವುದು. ಅಲ್ಲದೆ, ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳ ಬಗ್ಗೆ ಪರಿಸ್ಥಿತಿ ಅವಲೋಕಿಸಿ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
Share your comments