1. ಸುದ್ದಿಗಳು

ರಾಜ್ಯದಲ್ಲಿ ಅಬ್ಬರದ ಮಳೆ: ಗುಡುಗು,ಸಿಡಿಲಿನ ಸಲಹೆ ಸೂಚನೆಗಳ ಗೈಡಲೈನ್ಸ್‌ ರಿಲೀಸ್‌

Maltesh
Maltesh
Thunder Lightning NDMA Guidelines

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ/ಸೂಚನೆಗಳನ್ನು ನೀಡಿರುತ್ತದೆ. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು - ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು - ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ:

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು

ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು Common Alerting Protocol (CAP) ಮುಖಾಂತರ ಬರುವ ಮೆಸೇಜ್‌ಗಳನ್ನು ಮೊಬೈಲ್‌ನಲ್ಲಿ ಗಮನಿಸಿಸುವುದು.

ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು.

ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.

Weather Report: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೇ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು, ಇವು ಮಿಂಚನ್ನು ಆಕರ್ಷಿಸುತ್ತವೆ.

ಅರಣ್ಯ: ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು.

ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು.

ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಗಳನ್ನು ಬಳಸಬಾರದು.

ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪುಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು.

ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು.

ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು. ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು.

ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ

ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್‌ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.

ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು.

ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ, ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರುವುದು.

ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು.

ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ..ಕಾಂಗ್ರೆಸ್‌ ಮಹತ್ವದ ನಿರ್ಧಾರ

ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು.

ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಹೊಗೆಯಬಾರದು. ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು.

ಗುಡುಗು - ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು.

ಗುಡುಗು ಸಿಡಿಲಿನ ಸಮಯದಲ್ಲಿ, ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು.

ಮೂಲ: KarnatakaSNDMC GoK

Published On: 23 May 2023, 11:40 AM English Summary: Thunder Lightning NDMA Guidelines

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.