ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡುವ ವಿವಿಧ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಪ್ರಮುಖ ಹಾಗೂ ಸಾಮಾನ್ಯ ರೋಗಗಳ ನಿರ್ವಹಣೆ ಹಾಗೂ ನಿಯಂತ್ರಣ ವಿಧಾನಗಳ ಕುರಿತು ರೈತರಿಗೆ ಮಾಹಿತಿ ನೀಡುವ ಉದ್ದೇಶದಿಂದ ಬೀದರ್ ನಗರದಲ್ಲಿರುವ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಜುಲೈ 31ರಂದು ಬೆಳಗ್ಗೆ 11 ಗಂಟೆಗೆ ಆನ್ಲೈನ್ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
‘ಮುಂಗಾರು ಬೆಳೆಗಳಲ್ಲಿ ರೋಗಗಳ ಸಮಗ್ರ ನಿರ್ವಹಣೆ’ ಎಂಬುದು ತರಬೇತಿ ಕಾರ್ಯಾಗಾರದ ವಿಷಯವಾಗಿದ್ದು, ಬೀದರ್ನ ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾಗಿರುವ ಡಾ. ಸುನೀಲ ಎ ಕುಲಕರ್ಣಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಳೆದ 15 ದಿನಗಳಿಂದ ಸತತವಾಗಿ ಸುರಿದ ಮಳೆಯಿಂದಾಗಿ ಬೆಳೆಗೆ ರೋಗ ತಗಲುವ ಸಂಭವ ಹೆಚ್ಚಾಗಿದೆ. ಅಲ್ಲದೆ ಈಗಾಗಲೇ ಹಲವು ತಾಕುಗಳಲ್ಲಿ ಬೆಳೆಗಳಿಗೆ ರೋಗ ಬಾಧಿಸಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಬೀದರ್ ಕೃಷಿ ವಿಜ್ಞಾನ ಕೇಂದ್ರದ ‘ಕೆವಿಕೆ ಕೃಷಿ ಪಾಠ ಶಾಲೆ’ ಸರಣಿ ಕಾರ್ಯಕ್ರಮದ ಅಡಿಯಲ್ಲಿ ಮುಂಗಾರು ಬೆಳೆಗಳಲ್ಲಿ ರೋಗಗಳ ಸಮಗ್ರ ನಿರ್ವಹಣೆ ಮಾಡುವ ವಿಧಾನಗಳ ಕುರಿತು ರೈತರಿಗೆ ಆನ್ಲೈನ್ ತರಗತಿ ಆಯೋಜಿಸಲಾಗಿದೆ.
ಆಸಕ್ತ ರೈತ ಬಾಂಧವರು meet.google.com/vrw-brgm-hxq ಈ ಲಿಂಕ್ ಬಳಸಿಕೊಂಡು ಭಾಗವಹಿಸಬಹುದಾಗಿದೆ. ಹೆಚ್ಚಿನ ಸಂಖ್ಯೆಯ ರೈತರು ತರಬೇತಿಗೆ ಹಾಜರಾಗಿ ಮಾಹಿತಿ ಪಡೆಯುವಂತೆ ಹಾಗೂ ತಜ್ಞರು, ಸಂಪನ್ಮೂಲ ವ್ಯಕ್ತಿಗಳ ಜೊತೆ ಚರ್ಚಿಸಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳಲು ಕೋರಲಾಗಿದೆ.
ರಸಗೊಬ್ಬರ ಕಲಬೆರಕೆ ಕಂಡುಹಿಡಿಯುವ ವಿಧಾನ ಕುರಿತು ಜುಲೈ 31ರಂದು ಆನ್ಲೈನ್ ತರಬೇತಿ
ಹಾವೇರಿ ಜಿಲ್ಲೆಯ ದೇವಿ ಹೊಸೂರಿನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಹನುಮನಮಟ್ಟಿಯ ಕೃಷಿ ಮಹಾವಿದ್ಯಾಲಯದ ವತಿಯಿಂದ ಜುಲೈ 31ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ‘ರಸಗೊಬ್ಬರ ಕಲಬೆರಕೆ ಕಂಡುಹಿಡಿಯುವ ವಿಧಾನ’ ಎಂಬ ವಿಷಯದ ಕುರಿತು ಅಂತರ್ಜಾಲ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರದಲ್ಲಿ ಹನುಮನಮಟ್ಟಿಯ ಕೃಷಿ ಮಹಾವಿದ್ಯಾಲಯದ ಮಣ್ಣು ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕರಾಗಿರುವ ಡಾ.ಬಿ.ಆರ್.ಜಗದೀಶ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದು, ರಸಗೊಬ್ಬರದ ಕಲಬೆರಕೆಯನ್ನು ಕಂಡು ಹಿಡಿಯುವ ವಿಧಾಆನಗಳ ಕುರಿತು ರೈತ ಬಾಂಧವರಿಗೆ ಪ್ರಾತ್ಯಕ್ಷಿಕೆ ಮುಲಕ ಮಾಹಿತಿ ನೀಡಲಿದ್ದಾರೆ.
ಗೂಗಲ್ ಮೀಟ್ ವೇದಿಕೆಯಲ್ಲಿ ಕಾರ್ಯಾಗಾರವು ನಡೆಯಲಿದ್ದು, ಆಸಕ್ತ ರೈತ ಬಾಂಧವರು https://meet.google.com/zfz-jcyp-rhy ಈ ಲಿಂಕ್ ಬಳಸಿಕೊಂಡು ಭಾಗವಹಿಸಬಹುದಾಗಿದೆ. ಹೆಚ್ಚಿನ ಸಂಖ್ಯೆಯ ರೈತರು ತರಬೇತಿಗೆ ಹಾಜರಾಗಿ ಮಾಹಿತಿ ಪಡೆಯುವಂತೆ ಹಾಗೂ ತಜ್ಞರು, ಸಂಪನ್ಮೂಲ ವ್ಯಕ್ತಿಗಳ ಜೊತೆ ಚರ್ಚಿಸಿ ರಸಗೊಬ್ಬರ ಕುರಿತಂತೆ ತಮಗಿರುವ ಸಂದೇಹಗಳನ್ನು ಪರಿಹರಿಸಿಕೊಳ್ಳುವಂತೆ ದೇವಿ ಹೊಸೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಕಾರ್ಯಾಗಾರದಲ್ಲಿ ಭಾಗವಹಿಸುವ ರೈತರು ಮೊದಲು ತಮ್ಮ ಸ್ಮಾರ್ಟ್ ಫೋನ್ನಲ್ಲಿ ಗೂಗಲ್ ಮೀಟ್ ಅಪ್ಲಿಕೇಷನ್ (ಆ್ಯಪ್) ಅನ್ನು ಡೌನ್ಲೋಡ್ ಮಾಡಿಕೊಂಡು, ಬಳಿಕ ಮೇಲೆ ತಿಳಿಸಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ತರಬೇತಿಯಲ್ಲಿ ಭಾಗವಹಿಸಬಹುದು.ಸೂಚನೆಗಳು: ಗೂಗಲ್ ಮೀಟ್ ವೇದಿಕೆಗೆ ಹಾಜರಾದ ಕೂಡಲೇ ಸದಸ್ಯರು ತಮ್ಮ ಆಡಿಯೋ ಮತ್ತು ವಿಡಿಯೋವನ್ನು ಮ್ಯೂಟ್ ಮಾಡಬೇಕು. ತರಬೇತಿ ಆರಂಭದಲ್ಲಿ ‘ಪ್ರಸೆಂಟ್ ನೌ’ ಮೇಲೆ ಕ್ಲಿಕ್ ಮಾಡದೆ, ‘ಆಸ್ಕ್ ಟು ಜಾಯಿನ್’ ಮೇಲೆ ಒತ್ತಬೇಕು.
Share your comments