1. ಸುದ್ದಿಗಳು

ನಾಳೆಯಿಂದ ಬೆಣ್ಣೆ ನಗರಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Maltesh
Maltesh
Vikasita Bharat Sankalpa Yatra in davanager from tomorrow

ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ 79  ಅಧಿಕ ಜನಪ್ರಿಯ ಕಾರ್ಯಕ್ರಮಗಳನ್ನು ಜನರಿಗೆ ಪರಿಣಾಮಕಾರಿ ತಲುಪಿಸುವ ನಿಟ್ಟಿನಲ್ಲಿ  ವಿಕಸಿತ ಭಾರತ ಸಂಕಲ್ಪ ಯಾತ್ರೆ  ಮಹತ್ವದ ಹೆಜ್ಜೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕಿ ಮತ್ತು  ವಿಕಸಿತ ಭಾರತ ಸಂಕಲ್ಪ ಯಾತ್ರಾ ದಾವಣಗೆರೆ ಜಿಲ್ಲಾ ಪ್ರಭಾರಿ ರೋಲಿ ಖೇರೆ ಹೇಳಿದರು.

ದಾವಣಗೆರೆಯಲ್ಲಿಂದು ನಡೆದ ಯಾತ್ರೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು‌, ದಾವಣಗೆರೆ ಜಿಲ್ಲೆಯಲ್ಲಿ ಇದೇ 24 ರಿಂದ 2024 ರ ಜನವರಿ 12 ರ ವರೆಗೆ ಯಾತ್ರೆ ನಡೆಯಲಿದೆ ಎಂದರು.

ಕೇಂದ್ರ ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪಿ ಅವರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆ ಬಂದಿರುವುದನ್ನು ತಿಳಿಸುವುದರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಿಂದ ವಂಚಿತರಾಗಿರುವವರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಸಮರ್ಪಕವಾಗಿ ಕೈಗೊಳ್ಳಬೇಕೆಂದು  ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ವಿಕಸಿತ ಭಾರತ ಸಂಕಲ್ಪ ಯಾತ್ರೆ ದಾವಣಗೆರೆ ನಗರದಲ್ಲಿ 17 ಕಡೆ , 194  ಗ್ರಾಮ ಪಂಚಾಯತ್ ಸೇರಿದಂತೆ 230 ಕ್ಕೂ ಅಧಿಕ ಸ್ಥಳಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಚಲನಚಿತ್ರ ಪ್ರದರ್ಶನ, ಫಲಾಭವಿಗಳ ಅನಿಸಿಕೆಯನ್ನು ಅನಿಸಿಕೆಗಳನ್ನು ಸಂಗ್ರಹಿಸಲಿದೆ ಎಂದು ಅವರು ಹೇಳಿದರು.

 

ಸಭೆಯಲ್ಲಿ ಕೆನರಾ ಬ್ಯಾಂಕ್ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನಿರ್ದೇಶಕ ಜಿ.ಸಿ‌.ಪ್ರಕಾಶ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Published On: 23 November 2023, 03:58 PM English Summary: Vikasita Bharat Sankalpa Yatra in davanager from tomorrow

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.