ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಬಾರ ಕುಸಿತ ಪರಿಣಾಮವಾಗಿ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲಗಳಲಲ್ ಅಕ್ಟೋಬರ್ 11 ರಂದು ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ 9 ರಿಂದ 11ರವರೆಗೆ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸಕ್ರಿಯವಾಗಿದೆ. ಇದರ ಜೊತೆಗೆ ತೆಲಂಗಾಣದಲ್ಲಿ ಅಕ್ಟೋಬರ್ 9 ರಿಂದ ಅಕ್ಟೋಬರ್ 11ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇದೆ.
ಅಕ್ಟೋಬರ್ 10 ಮತ್ತು 11ರಂದು ಪಶ್ಚಿಮ ಬಂಗಾಳ ಕೊಲ್ಲಿ, ಉತ್ತರ ಬಂಗಾಳ ಕೊಲ್ಲಿ, ಆಂಧ್ರಪ್ರದೇಶ ಮತ್ತು ಒಡಿಶಾ ದಲ್ಲಿ ಪರಿಣಾಮ ಬೀರಲಿದೆ.
ಮುಂದಿನ 24 ಗಂಟೆಗಳಲ್ಲಿ ಹವಾಮಾನ ಮುನ್ಸೂಚನೆ: ಮುಂದಿನ 24 ಗಂಟೆಗಳಲ್ಲಿ ಈಶಾನ್ಯ ಭಾರತ, ಪಶ್ಚಿಮ ಬಂಗಾಳ, ಬಿಹಾರದ ಕೆಲವು ಭಾಗಗಳು, ಜಾರ್ಖಂಡ್ ನ ಕೆಲವು ಭಾಗಗಳು, ಛತ್ತೀಸ್ ಗಢ, ಪೂರ್ವ ಮಧ್ಯಪ್ರದೇಶ, ವಿದರ್ಭ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ಭಾಗಗಳಲ್ಲಿ ಒಂದೆರಡು ಕಡೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದಲ್ಲಿ ಸಾಧಾರಣ ಮಳೆ ಸಾಧ್ಯತೆಯಿದೆ. ಮಧ್ಯ ಮಹಾರಾಷ್ಟ್ರ, ಮರಾಠವಾಡ, ಲಕ್ಷದ್ವೀಪ ಮತ್ತು ಉತ್ತರ ಪ್ರದೇಶದ ಒಂದೆರಡು ಸ್ಥಳಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.
Share your comments