1. ಸುದ್ದಿಗಳು

ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಹೇಗಿದೆ? ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

Maltesh
Maltesh
weather change in karnataka

18 ನೇ ಜುಲೈ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ

ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ  ಹಾಗೂ  ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: : ಕರಾವಳಿಯ ಬಹುತೇಕ ಕಡೆಗಳಲ್ಲಿ  ಹಾಗೂ  ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. 

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಮುನ್ನೆಚ್ಚರಿಕೆ:  ಮುಂದಿನ 48 ಘಂಟೆಗಳು: ರಾಜ್ಯದ  ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು 30-40 ಕಿ.ಮೀ. ಇರುವ ಸಾಧ್ಯತೆ ಇದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.18 ನೇ ಜುಲೈ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ ಮಳೆ/ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.   ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ ಮಳೆ/ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.   ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.  ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21  ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

Published On: 17 July 2023, 11:41 AM English Summary: weather change in karnataka

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.