ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜೂನ್ 25 ರಿಂದ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕಳೆದ ಎರಡು ವಾರಗಳಿಂದ ಮುಂಗಾರು ಚುರುಕುಗೊಂಡಿದೆ. ಈಗಾಗಲೇ ಬಿತ್ತನೆ ಕೆಲಸವೂ ನಡೆಯುತ್ತಿದೆ. ಕಳೆದ ಮೂರು ದಿನಗಳಿಂದ ಮುಂಗಾರು ದುರ್ಬಲಗೊಂಡಿತ್ತು. ಈಗ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ 25 ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇದೇ 24ರಿಂದ 26ರವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ
ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ ಮಂಗಳವಾರ 7 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕಾರವಾರ 6, ಭಟ್ಕಳ, ಹೊನ್ನಾವರ 5, ಉಪ್ಪಿನಂಗಡಿ, ಶೃಂಗೇರಿ 4, ಸುಳ್ಯ, ಕೊಲ್ಲೂರು, ಮಂಗಳೂರು, ಕುಂದಾಪುರ, ಧರ್ಮಸ್ಥಳ, ಮೂಡುಬಿದ್ರೆ, ಪುತ್ತೂರು, ಗೋಕರ್ಣ, ಹೊಸನಗರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
ಕಲಬುರಗಿ, ಬೀದರ್, ಯಾದಗರಿ, ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಚದುರಿದ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾರವಣವಿದೆ.
Share your comments