ಹುಬ್ಬಳ್ಳಿ,(ಫೆ.21): ಲೋಕಸಭಾ ಸಮರಕ್ಕೆ ಎಲ್ಲಾ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿವೆ. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಮತದಾರರ ಮನ ಗೆಲ್ಲಲು ಕ್ಷೇತ್ರ ಪ್ರವಾಸದಲ್ಲಿ ನಿರತರಾಗಿದ್ದಾರೆ. ರಾಜಕೀಯ ಸಮಾವೇಶಗಳನ್ನು ಆಯೋಜಿಸಿ ಸಮರಕ್ಕೆ ಸಜ್ಜಾಗುತ್ತಿದ್ದಾರೆ. ಇನ್ನೊಂದೆಡೆ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಸೀಟು ಹಂಚಿಕೆ ವಿಚಾರವಾಗಿ ಒಡಕು ಮೂಡಿದೆ. ಇದೇ ವಿಚಾರವಾಗಿ ಎಚ್.ಡಿ. ಕುಮಾರಸ್ವಾಮಿ ನಾವು ಭಿಕ್ಷುಕರಲ್ಲ ಎಂದು ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಸೀಟು ಹಂಚಿಕೆ ವಿಚಾರ ಸಂಬಂಧ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದೆ. ಆದರೆ ಜೆಡಿಎಸ್-ಕಾಂಗ್ರೆಸ್ ಸೀಟು ಹಂಚಿಕೆ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ. ಮೈತ್ರಿ ಸರ್ಕಾರದಲ್ಲಿ ಯಾರೂ ಕೂಡ ಭಿಕ್ಷುಕರಲ್ಲ. ಸಮನ್ವಯತೆಯಿಂದ ಕೂತು ಸೀಟು ಹಂಚಿಕೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಜೆಡಿಎಸ್-ಕಾಂಗ್ರೆಸ್ ಸೀಟು ಹಂಚಿಕೆ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ; ಸಿದ್ದರಾಮಯ್ಯ
Published On: 21 February 2019, 01:55 PM
English Summary: ಜೆಡಿಎಸ್-ಕಾಂಗ್ರೆಸ್ ಸೀಟು ಹಂಚಿಕೆ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ; ಸಿದ್ದರಾಮಯ್ಯ
Share your comments